ಮ್ಯಾಂಚೆಸ್ಟರ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ಇಲ್ಲಿನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಬುಧವಾರ ಆರಂಭವಾದ ಆಷಸ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಂಗ್ಲ ವೇಗಿ ಸ್ಟುವರ್ಟ್ ಬ್ರಾಡ್ ವಿಶೇಷ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳನ್ನು ಬ್ರಾಡ್ ಪೂರ್ಣಗೊಳಿಸಿದ್ದಾರೆ.
ಟಾಸ್ ಗೆದ್ದು ಎದುರಾಳಿ ಆಸ್ಟ್ರೇಲಿಯಾ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ ಇಂಗ್ಲೆಂಡ್ ತಂಡದ ಪರ ಹೊಸ ಚೆಂಡಿನಲ್ಲಿ ಬೌಲ್ ಮಾಡಿದ ಸ್ಟುವರ್ಟ್ ಬ್ರಾಡ್ ಅವರು ತಮ್ಮ 5ನೇ ಓವರ್‌ನಲ್ಲಿ ಉಸ್ಮಾನ್ ಖವಾಜ ಅವರನ್ನು ಔಟ್ ಮಾಡಿದ್ದರು. ನಂತರ 48 ರನ್ ಗಳಿಸಿ ಕ್ರೀಸ್‌ನಲ್ಲಿ ನೆಲೆಯೂರಿದ್ದ ಟ್ರಾವಿಸ್ ಹೆಡ್ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದ್ದರು. ಹೆಡ್ ವಿಕೆಟ್ ಪಡೆಯುತ್ತಿದ್ದಂತೆ ಸ್ಟುವರ್ಟ್ ಬ್ರಾಡ್ ಅವರು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳ ಸಾಧನೆ ಮಾಡಿದರು.
ಹಿರಿಯ ವೇಗಿ ಜೇಮ್ಸ್ ಆಂಡರ್ಸನ್ ಅವರ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳನ್ನು ಪಡೆದ ಎರಡನೇ ಇಂಗ್ಲೆಂಡ್ ವೇಗಿ ಎಂಬ ದಾಖಲೆಯನ್ನು ಸ್ಟುವರ್ಟ್ ಬ್ರಾಡ್ ಬರೆದಿದ್ದಾರೆ. ಒಟ್ಟಾರೆ ದೀರ್ಘಾವಧಿ ಸ್ವರೂಪದಲ್ಲಿ 600 ವಿಕೆಟ್‌ಗಳ ಸಾಧನೆ ಮಾಡಿದ ವಿಶ್ವದ ಐದನೇ ಬೌಲರ್ ಎಂಬ ಸಾಧನೆಗೆ ಬ್ರಾಡ್ ಭಾಜನರಾಗಿದ್ದಾರೆ.
ಮುತ್ತಯ್ಯ ಮುರಳಿಧರನ್: 800 ವಿಕೆಟ್‌ಗಳು (133 ಟೆಸ್ಟ್‌ಗಳು)
ಶೇನ್ ವಾರ್ನ್: 708 ವಿಕೆಟ್‌ಗಳು (145 ಟೆಸ್ಟ್‌ಗಳು)
ಜೇಮ್ಸ್ ಆಂಡರ್ಸನ್: 688 ವಿಕೆಟ್‌ಗಳು (182 ಟೆಸ್ಟ್‌ಗಳು)
ಅನಿಲ್ ಕುಂಬ್ಳೆ: 619 ವಿಕೆಟ್‌ಗಳು (132 ಟೆಸ್ಟ್‌ಗಳು)
ಸ್ಟುವರ್ಟ್ ಬ್ರಾಡ್: 600* ವಿಕೆಟ್‌ಗಳು (166 ಟೆಸ್ಟ್‌ಗಳು)
ಆಸ್ಟ್ರೇಲಿಯಾ ಮಾಜಿ ಸ್ಪಿನ್ನರ್ ಹಾಗೂ ದಿವಂಗತ ಶೇನ್‌ವಾರ್ನ್ ಅವರು 2005ರಲ್ಲಿ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿಯೇ 600 ಟೆಸ್ಟ್ ವಿಕೆಟ್‌ಗಳನ್ನು ಪೂರ್ಣಗೊಳಿಸಿದ್ದರು. ಅಂದು ಮಾರ್ಕಸ್ ಟ್ರೆಸ್ಕೋಥಿಕ್ ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ಸ್ಪಿನ್ ದಿಗ್ಗಜ ಈ ಸಾಧನೆ ಮಾಡಿದ್ದರು.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ ಎನಿಸಿಕೊಂಡ ಸ್ಟುವರ್ಟ್ ಬ್ರಾಡ್ ಅವರು ಇಯಾನ್ ಬೋಥಮ್ ದಾಖಲೆಯನ್ನು ಮುರಿದಿದ್ದಾರೆ. ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡುವ ಮೂಲಕ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಗಳಲ್ಲಿ ಬ್ರಾಡ್ 149ನೇ ವಿಕೆಟ್ ಅನ್ನು ಪೂರ್ಣಗೊಳಿಸಿದ್ದಾರೆ.
ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಅವರು ಜೊತೆಯಾಗಿ ಆಡಿದ 133 ಟೆಸ್ಟ್ ಪಂದ್ಯಗಳಿಂದ 1000 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಇಬ್ಬರ ಜೋಡಿಯಿಂದ ಇಂಗ್ಲೆಂಡ್ ತಂಡ ಹಲವು ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಇಬ್ಬರೂ ಅತ್ಯಂತ ಯಶಸ್ವಿ ಜೋಡಿಯಾಗಿದೆ.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…