ಕ್ರೀಡೆ

Paris Olympics 2024: ಬ್ಯಾಡ್ಮಿಂಟನ್‌ ಡಬಲ್ಸ್‌ನ ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಭಾರತದ ಜೋಡಿ

ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯ ಬ್ಯಾಡ್ಮಿಂಟನ್‌ ಡಬಲ್ಸ್‌ನಲ್ಲಿ ಭಾರತದ ಅಶ್ವಿನಿ ಪೊನ್ನಪ್ಪ ಹಾಗೂ ತನಿಷಾ ಕ್ರಾಸ್ತೊ ಜೋಡಿ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ.

ಶನಿವಾರ ನಡೆದ ಮಹಿಳಾ ಡಬಲ್ಸ್‌ ಬ್ಯಾಡ್ಮಿಂಟನ್‌ನಲ್ಲಿ ದಕ್ಷಿಣ ಕೊರಿಯಾದ ಕಾಗ್‌ ಹೀ ಯಾಂಗ್‌ ಹಾಗೂ ಕಿಮ್‌ ಸೊ ಯೊಯಾಂಗ್‌ ಜೋಡಿ ವಿರುದ್ಧ 18-21, 10-21 ಅಂತರದಿಂದ ಭಾರತದ ಜೋಡಿ ಸೋಲು ಕಂಡಿತು.

44 ನಿಮಿಷಗಳ ನೇರ ಹಣಾಹಣೆಯಲ್ಲಿ ತೀವ್ರ ಪೈಪೋಟಿಯಲ್ಲಿ ಭಾರತದ ವನಿತೆಯರು ನಿರಾಸದಾಯಕ ಸೋಲು ಕಂಡರು. ಮೊದಲ ಸೆಟ್‌ನಲ್ಲಿ ತೀವ್ರ ಪೈಪೋಟಿ ನೀಡಿದರು. ಆದರೆ, ಎರಡನೇ ಸುತ್ತಿನಲ್ಲಿ ನಿರೀಕ್ಷಿತಾ ಆಟ ಆಡುವಲ್ಲಿ ವಿಫಲರಾಗಿ ಮೊದಲ ಪಂದ್ಯದಲ್ಲಿ ಸೋಲನುಭವಿಸಿದರು.

ಮುಂದಿನ ಪಂದ್ಯದಲ್ಲಿ ಜಪಾನ್‌ನ ನಮಿ ಮತ್ಸುಯಾಮ ಮತ್ತು ಚಿಹರು ಶಿದಾ ಅವರ ವಿರುದ್ಧ ಸೋಮವಾರ ಸೆಣಸಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

53 mins ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

1 hour ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

1 hour ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

1 hour ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

3 hours ago