ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್ ಚಾಂಪಿಯನ್ ಆಗಿದ್ದ ಭಾರತ ಇದೀಗ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಇದು ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್ ಚಾಂಪಿಯನ್ ಪಟ್ಟವಾಗಿದೆ. ಇನ್ನೂ 6 ಬಾರಿ ಚಾಂಪಿಯನ್ ಹಾಗೂ 6 ಬಾರಿ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್ ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಲಂಕಾ ಕೇವಲ 6 ಓವರ್‌ಗಳಲ್ಲಿ 13 ರನ್‌ಗಳಿಗೆ ಪ್ರಮುಖ 6 ವಿಕೆಟ್ ಗಳನ್ನ ಕಳೆದುಕೊಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಪತುಮ್ ನಿಸ್ಸಂಕ (2 ರನ್), ಕುಶಲ್ ಮೆಂಡಿಸ್ (17 ರನ್), ಧನಂಜಯ ಡಿ ಸಿಲ್ವಾ (4 ರನ್), ದುನಿತ್ ವೆಲ್ಲಾಳ (8 ರನ್) ಗಳಿಸಿದ್ರೆ ಕುಶಲ್ ಪೆರೇರ, ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ನಾಯಕ ದಸುನ್ ಶನಾಕ (Dasun Shanaka) ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಕೊನೆಯಲ್ಲಿ ಪ್ರಮೋದ್ ಮಧೂಶನ್ 1 ರನ್ ಗಳಿಸಿದ್ರೆ, ಮತೀಶ ಪಥಿರಣ ಶೂನ್ಯಕ್ಕೆ ಔಟಾದರು. ದುಶನ್ ಹೇಮಂತ 13 ರನ್‌ಗಳಿಸಿ ಕ್ರೀಸ್‌ನಲ್ಲಿ ಉಳಿದರು.
ಲಂಕಾ ವಿರುದ್ಧ ಮಾರಕ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಸಿರಾಜ್, 7 ಓವರ್‌ಗಳಲ್ಲಿ 21 ರನ್ ಬಿಟ್ಟುಕೊಟ್ಟು 6 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 2.2 ಓವರ್‌ಗಳಲ್ಲಿ 3 ರನ್ ನೀಡಿ 3 ವಿಕೆಟ್ ಕಿತ್ತರು. ಜಸ್ಪ್ರೀತ್ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…