ಏಷ್ಯಾಕಪ್ 2023ರಲ್ಲಿ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸ್ಟಾರ್ ಬೌಲರ್ ಆಗಿದ್ದರು. ಆದರೆ ಇದೀಗ ಅವರು ಟೂರ್ನಿ ಮಧ್ಯೆ ಭಾರತಕ್ಕೆ ಮರಳಿದ್ದಾರೆ.
ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ಮರಳಿದ್ದಾರೆ. ಆದರೆ, ಅಭಿಮಾನಿಗಳಿಗೆ ಸಂತಸದ ಸುದ್ದಿ ಏನೆಂದರೆ ಅವರು ಏಷ್ಯಾಕಪ್ ಸೂಪರ್-4 ಹಂತಕ್ಕೆ ಬಹುಶಃ ತಂಡವನ್ನು ಸೇರಿಕೊಳ್ಳಬಹುದು. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಶಮಿ ಆಡಲಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ಭಾರತದ ಮುಂದಿನ ಪಂದ್ಯ ನೇಪಾಳ ವಿರುದ್ಧ ಸೋಮವಾರ ನಡೆಯಲಿದೆ.
ಮಾಧ್ಯಮ ವರದಿಗಳ ಪ್ರಕಾರ, ಜಸ್ಪ್ರೀತ್ ಬುಮ್ರಾ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಆದರೆ ವೈಯಕ್ತಿಕ ಕಾರಣಗಳಿಂದ ಅವರು ಸೋಮವಾರ (ಸೆಪ್ಟೆಂಬರ್ 4) ನೇಪಾಳ ವಿರುದ್ಧದ ಪಂದ್ಯದಲ್ಲಿ ಆಯ್ಕೆಗೆ ಲಭ್ಯವಿರುವುದಿಲ್ಲ. ಆದಾಗ್ಯೂ, ವರದಿಯ ಪ್ರಕಾರ, ಅವರು ಭಾರತದ ಸೂಪರ್-4 ಹಂತದ ಪಂದ್ಯಗಳಲ್ಲಿ ಪುನರಾಗಮನ ಮಾಡುತ್ತಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಶನಿವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಲ್ಲಿ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ ಆದರೆ ಅವರು ಬ್ಯಾಟಿಂಗ್‌ನಲ್ಲಿ ತಮ್ಮ ಬಲವನ್ನು ತೋರಿಸಿದರು. ಅವರು 14 ಎಸೆತಗಳಲ್ಲಿ 16 ರನ್ ಗಳಿಸಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳನ್ನು ಬಾರಿಸಿದ್ದರು.
ಜಸ್ಪ್ರೀತ್ ಬುಮ್ರಾ ಕಳೆದ ತಿಂಗಳು ಐರ್ಲೆಂಡ್ ಪ್ರವಾಸದಲ್ಲಿ ನಾಯಕನಾಗಿ ಭಾರತ ತಂಡಕ್ಕೆ ಮರಳಿದ್ದರು. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಬೆನ್ನು ನೋವಿನಿಂದಾಗಿ ಅವರು ಸುಮಾರು 11 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರವಿದ್ದರು.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…