ದುಬೈ : ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಏಷ್ಯಾಕಪ್ 2025 ರ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಟೂರ್ನಿಯಲ್ಲಿ ಈ ಎರಡೂ ತಂಡಗಳ ನಡುವಿನ ಮೂರನೇ ಪಂದ್ಯ ಇದಾಗಿದೆ. ಹಿಂದಿನ ಎರಡೂ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ.
ಇದನ್ನೂ ಓದಿ:-ಮೈಸೂರು | ವೆಶ್ಯವಾಟಿಕೆಗೆ ಬಲಿಯಾಗುತ್ತಿದ್ದ ಬಾಲಕಿ ರಕ್ಷಣೆ; ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷ ಡಿಮ್ಯಾಂಡ್
2025 ರ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಈ ಮೊದಲು ಎರಡು ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದು, ಈ ಎರಡೂ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ. ಈಗ ಮೂರನೇ ಬಾರಿಗೆ ಇದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ. ಏಷ್ಯಾಕಪ್ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವುದು ಈ ಪಂದ್ಯಕ್ಕೆ ಮತ್ತಷ್ಟು ಮೆರಗು ತಂದಿದೆ.





