Mysore
23
few clouds

Social Media

ಬುಧವಾರ, 21 ಜನವರಿ 2026
Light
Dark

Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಕಳಪೆ ಬ್ಯಾಟಿಂಗ್‌ನಿಂದಾಗಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿ ಟೀಂ ಇಂಡಿಯಾಗೆ 128 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತ 18 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತ ಪರ ಅಭಿಶೇಷ್ ಶರ್ಮಾ ಮೊದಲ ಎಸೆತದಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಪರಿಣಾಮ ಭಾರತ ಉತ್ತಮ ಓಪನಿಂಗ್ ಪಡೆಯಿತು. 13 ಎಸೆತಗಳಲ್ಲಿ 2 ಸಿಕ್ಸರ್ 4 ಬೌಂಡರಿ ಸೇರಿದಂತೆ 31 ರನ್ ಬಾರಿಸಿ ಸೈಮ್ ಆಯೂಬ್ ಬೌಲಿಂಗ್ ನಲ್ಲಿ ಔಟಾದರು. ಇನ್ನು ಶುಭ್ಮನ್ ಗಿಲ್ ಸಹ ಉತ್ತಮ ಬ್ಯಾಟಿಂಗ್ ಆರಂಭಿಸಿದರು. ಆದರೆ 10 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಸ್ಟಂಪ್ ಔಟ್ ಆದರು.

ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡದ ರನ್ ಗತಿ ಹೆಚ್ಚಿಸಿದರು. ಆದರೆ 31 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ತೆರಳಿದರು. ನಂತರ ಸೂರ್ಯಕುಮಾರ್ ಹಾಗೂ ಶಿವಂ ದುಬೆ ಜೊತೆಯಾಗಿ ಭಾರತ ತಂಡವನ್ನು ಗೆಲುವಿನ ದಡ ಸೇರಿದರು.

ಅಂತಿಮವಾಗಿ ಭಾರತ 3 ವಿಕೆಟ್ ನಷ್ಟಕ್ಕೆಆರಂಭದಿಂದಲೂ ಪಾಕ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ ಗಳು ಯಶಸ್ವಿಯಾದರು. ಪಾಕ್ ಪರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ತಂಡಕ್ಕೆ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರಂಭಿಕ ಆಟಗಾರ ಸಯೀಂ ಅಯೂಬ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದ ಬಹುತೇಕ ಬ್ಯಾಟ್ಸ್ ಮನ್ ಗಳು 2 ಅಂಕಿಯ ಸ್ಕೋರ್ ನ್ನೂ ದಾಟಲು ಸಾಧ್ಯವಾಗಲಿಲ್ಲ. ಸಾಹಿಬ್‌ಜಾದಾ ಫರ್ಹಾನ್ 44 ಎಸೆತಗಳಲ್ಲಿ 40 ರನ್ ಗಳಿಸಿದ್ದು ತಂಡದಲ್ಲಿ ಗರಿಷ್ಠ ಸ್ಕೋರ್ ಆಗಿದೆ.

ಭಾರತದ ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬೂಮ್ರಾ, ಅಕ್ಸರ್ ಪಟೇಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ 1 ವಿಕೆಟ್ ಗಳಿಸಿದರು.

Tags:
error: Content is protected !!