ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ.
ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಕಳಪೆ ಬ್ಯಾಟಿಂಗ್‌ನಿಂದಾಗಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿ ಟೀಂ ಇಂಡಿಯಾಗೆ 128 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಭಾರತ 18 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಭಾರತ ಪರ ಅಭಿಶೇಷ್ ಶರ್ಮಾ ಮೊದಲ ಎಸೆತದಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಪರಿಣಾಮ ಭಾರತ ಉತ್ತಮ ಓಪನಿಂಗ್ ಪಡೆಯಿತು. 13 ಎಸೆತಗಳಲ್ಲಿ 2 ಸಿಕ್ಸರ್ 4 ಬೌಂಡರಿ ಸೇರಿದಂತೆ 31 ರನ್ ಬಾರಿಸಿ ಸೈಮ್ ಆಯೂಬ್ ಬೌಲಿಂಗ್ ನಲ್ಲಿ ಔಟಾದರು. ಇನ್ನು ಶುಭ್ಮನ್ ಗಿಲ್ ಸಹ ಉತ್ತಮ ಬ್ಯಾಟಿಂಗ್ ಆರಂಭಿಸಿದರು. ಆದರೆ 10 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಸ್ಟಂಪ್ ಔಟ್ ಆದರು.
ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ತಂಡದ ರನ್ ಗತಿ ಹೆಚ್ಚಿಸಿದರು. ಆದರೆ 31 ರನ್ ಗಳಿಸಿದ್ದಾಗ ಸೈಮ್ ಆಯೂಬ್ ಎಸೆತದಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಗೆ ತೆರಳಿದರು. ನಂತರ ಸೂರ್ಯಕುಮಾರ್ ಹಾಗೂ ಶಿವಂ ದುಬೆ ಜೊತೆಯಾಗಿ ಭಾರತ ತಂಡವನ್ನು ಗೆಲುವಿನ ದಡ ಸೇರಿದರು.
ಅಂತಿಮವಾಗಿ ಭಾರತ 3 ವಿಕೆಟ್ ನಷ್ಟಕ್ಕೆಆರಂಭದಿಂದಲೂ ಪಾಕ್ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಭಾರತೀಯ ಬೌಲರ್ ಗಳು ಯಶಸ್ವಿಯಾದರು. ಪಾಕ್ ಪರ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ತಂಡಕ್ಕೆ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆರಂಭಿಕ ಆಟಗಾರ ಸಯೀಂ ಅಯೂಬ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಧ್ಯಮ ಕ್ರಮಾಂಕದ ಬಹುತೇಕ ಬ್ಯಾಟ್ಸ್ ಮನ್ ಗಳು 2 ಅಂಕಿಯ ಸ್ಕೋರ್ ನ್ನೂ ದಾಟಲು ಸಾಧ್ಯವಾಗಲಿಲ್ಲ. ಸಾಹಿಬ್‌ಜಾದಾ ಫರ್ಹಾನ್ 44 ಎಸೆತಗಳಲ್ಲಿ 40 ರನ್ ಗಳಿಸಿದ್ದು ತಂಡದಲ್ಲಿ ಗರಿಷ್ಠ ಸ್ಕೋರ್ ಆಗಿದೆ.
ಭಾರತದ ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಜಸ್ಪ್ರೀತ್ ಬೂಮ್ರಾ, ಅಕ್ಸರ್ ಪಟೇಲ್ ತಲಾ 2 ವಿಕೆಟ್, ಹಾರ್ದಿಕ್ ಪಾಂಡ್ಯ 1 ವಿಕೆಟ್ ಗಳಿಸಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…