ಕ್ರೀಡೆ

Asia cup | ನಾಳೆ ಭಾರತ-ಪಾಕ್‌ ಫೈನಲ್‌ : ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಿದ್ಧ

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.

41 ವರ್ಷಗಳ ಏಶ್ಯಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಣಸಾಡಲಿವೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪ್ರಸಕ್ತ ಟೂರ್ನಮೆಂಟ್‌ನಲ್ಲಿ ಮೂರನೇ ಬಾರಿ ಸೆಣಸಾಡುತ್ತಿವೆ. ಎರಡೂ ಬಾರಿಯೂ ಟೀಮ್ ಇಂಡಿಯಾವು ಪಾಕ್ ವಿರುದ್ಧ ಸುಲಭ ಜಯ ದಾಖಲಿಸಿ ಭರ್ಜರಿ ಫಾರ್ಮ್‌ನಲ್ಲಿದ್ದು, ಪಂದ್ಯಾವಳಿಯಲ್ಲಿ ಆಡಿರುವ ಎಲ್ಲ 6 ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ :-ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಪ್ರಸಕ್ತ ಏಶ್ಯ ಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಲೀಗ್ ಹಂತ ಹಾಗೂ ಸೂಪರ್-4 ಹಂತದಲ್ಲಿ ಭಾರತ ತಂಡವು ಜಯಭೇರಿ ಬಾರಿಸಿದೆ. ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡವು ಭಾನುವಾರದ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನ ತಂಡಕ್ಕೆ ಸೋಲುಣಿಸಿ 9ನೇ ಬಾರಿ ಏಶ್ಯ ಕಪ್ ಪ್ರಶಸ್ತಿ ಜಯಿಸಿ ದಾಖಲೆ ನಿರ್ಮಿಸಲು ಎದುರು ನೋಡುತ್ತಿದೆ.

ಮತ್ತೊಂದೆಡೆ ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಮಿಶ್ರ ಫಲಿತಾಂಶ ಪಡೆದಿದೆ. ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಆಡಿರುವ ಎರಡೂ ಪಂದ್ಯಗಳನ್ನು ಸೋತಿದ್ದು, ಇನ್ನುಳಿದ ಕೆಲವು ಪಂದ್ಯಗಳಲ್ಲಿ ಪ್ರಯಾಣದ ಗೆಲುವು, ಇನ್ನೂ ಕೆಲವು ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.

ಭಾರತ ತಂಡವು ಟೂರ್ನಿಯಲ್ಲಿ ತನ್ನ ಗೆಲುವಿನ ಓಟ ಮುಂದುವರಿಸುವತ್ತ ಚಿತ್ತ ಹರಿಸಿದರೆ, ಪಾಕಿಸ್ತಾನ ತಂಡ ‘ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ’ ಭಾರತಕ್ಕೆ ಸೋಲುಣಿಸಿ ಏಶ್ಯ ಕಪ್ ಟ್ರೋಫಿಯನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ.

ಐದಕ್ಕಿಂತ ಹೆಚ್ಚು ತಂಡಗಳು ಭಾಗವಹಿಸಿರುವ ಐದು ಪಂದ್ಯಾವಳಿಗಳಲ್ಲಿ ಎರಡೂ ತಂಡಗಳು 5 ಬಾರಿ ಫೈನಲ್‌ನಲ್ಲಿ ಸೆಣಸಾಡಿವೆ. ಈ ಟೂರ್ನಿಗಳ ಹೆಡ್-ಟು-ಹೆಡ್ ದಾಖಲೆಯಲ್ಲಿ ಪಾಕಿಸ್ತಾನ ತಂಡವು 3-2 ಅಲ್ಪ ಮುನ್ನಡೆಯಲ್ಲಿದೆ.

ಪಾಕಿಸ್ತಾನ ತಂಡದ ಹಿರಿಯ ಬೌಲರ್ ಶಾಹೀನ್ ಅಫ್ರಿದಿ ಹಿಂದಿನ ಎರಡು ಪಂದ್ಯಗಳಲ್ಲಿ ತಲಾ 3 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೂರ್ನಿಯಲ್ಲಿ ಒಟ್ಟು 9 ವಿಕೆಟ್‌ಗಳನ್ನು ಪಡೆದಿದ್ದರೂ ಭಾರತ ತಂಡದ ವಿರುದ್ಧ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಭಾರತ ವಿರುದ್ಧ ಆಡಿರುವ 2 ಪಂದ್ಯಗಳಲ್ಲಿ ತನ್ನ 5.5 ಓವರ್‌ಗಳಲ್ಲಿ 63 ರನ್ ನೀಡಿದ್ದಾರೆ.

ಒಟ್ಟಾರೆ, ಉಭಯ ತಂಡಗಳ ನಡುವೆ ನಡೆದ ಮಾತಿ ಚಕಮಕಿ ಹಾಗೂ ಮೈದಾನದಲ್ಲಿನ ಆಟಗಾರರ ಕೆಲವು ವರ್ತನೆಗಳು ಪೈನಲ್‌ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

8 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

9 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

10 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

10 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

11 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

11 hours ago