ಮುಂಬೈ : ಏಷ್ಯಾ ಕಪ್ 2025ರ ಟೂರ್ನಿಗಾಗಿ ಟೀಂ ಇಂಡಿಯಾ ತಂಡದ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ.
ಮಂಗಳವಾರ ಮಧ್ಯಾಹ್ನ ನಡೆದ ಆಯ್ಕೆ ಮಂಡಳಿ ಸಭೆಯಲ್ಲಿ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಲಾತಿತು. ಶುಭಮನ್ ಗಿಲ್ ಉಪನಾಯಕರಾದರೇ, ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಆರಂಭವಾಗುವ ಏಷ್ಯಾಕಪ್‌ನೊಂದಿಗೆ ಭಾರತವು ಮುಂದಿನ ಫೆಬ್ರವರಿಯಲ್ಲಿ ಪುರುಷರ ಟಿ20 ವಿಶ್ವಕಪ್‌ಗೆ ಸಿದ್ಧತೆ ಪ್ರಾರಂಭಿಸಲಿದೆ. ಒಂದು ದಿನದ ನಂತರ ಭಾರತ ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಭಾರತ ತಂಡ ಹೀಗಿದೆ?
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ರಿಂಕು ಸಿಂಗ್,
ಐದು ಸ್ಟ್ಯಾಂಡ್-ಬೈಗಳು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್.





