ನವದೆಹಲಿ: ಏಷ್ಯಾಕಪ್ 2023ರ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.
ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವುದು ವಿಶೇಷ
ಅಂದರೆ ಈ ಬಾರಿಯ ಏಷ್ಯಾಕಪ್ ಹೈ ಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಟೂರ್ನಿಯು ಪಾಕ್ನಲ್ಲಿ ನಡೆಯಬೇಕಿತ್ತು. ಆದರೆ ಪಾಕಿಸ್ತಾನದಲ್ಲಿ ಟೂರ್ನಿ ನಡೆದರೆ ಭಾರತ ತಂಡವು ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ.
ಅದರಂತೆ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಪಂದ್ಯಗಳಿಗಾಗಿ ಉಳಿದ ತಂಡಗಳು ಲಂಕಾಗೆ ಆಗಮಿಸಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
ಏಷ್ಯಾಕಪ್ ವೇಳಾಪಟ್ಟಿ:
ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)
ಸೂಪರ್-4 ಹಂತದ ವೇಳಾಪಟ್ಟಿ:
ಸೆಪ್ಟೆಂಬರ್ 6- A1 Vs B2 (ಲಾಹೋರ್)
ಸೆಪ್ಟೆಂಬರ್ 9- B1 Vs B2 (ಕೊಲಂಬೊ)
ಸೆಪ್ಟೆಂಬರ್ 10- A1 Vs A2 (ಕೊಲಂಬೊ)
ಸೆಪ್ಟೆಂಬರ್ 12- A2 Vs B1 (ಕೊಲಂಬೊ)
ಸೆಪ್ಟೆಂಬರ್ 14- A1 Vs B1 (ಕೊಲಂಬೊ)
ಸೆಪ್ಟೆಂಬರ್ 15- A2 Vs B2 (ಕೊಲಂಬೊ)
ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)
ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಈ ಹಿಂದಿನ 5 ತಂಡಗಳ ಜೊತೆ ಈ ಬಾರಿ ನೇಪಾಳ ತಂಡವು ಅರ್ಹತೆ ಪಡೆದುಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಕಣಕ್ಕಿಳಿಯುತ್ತಿರುವ ನೇಪಾಳ ತಂಡವು ಗ್ರೂಪ್-ಬಿ ನಲ್ಲಿದ್ದು, ಏಷ್ಯಾದ ಬಲಿಷ್ಠ ಎರಡು ತಂಡಗಳಾದ ಭಾರತ ಮತ್ತು ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.
ಏಷ್ಯಾಕಪ್ ಗ್ರೂಪ್ಗಳು:
ಗ್ರೂಪ್- A ತಂಡಗಳು:
ಭಾರತ
ಪಾಕಿಸ್ತಾನ್
ನೇಪಾಳ
ಗ್ರೂಪ್- B ತಂಡಗಳು
ಶ್ರೀಲಂಕಾ
ಅಫ್ಘಾನಿಸ್ತಾನ್
ಬಾಂಗ್ಲಾದೇಶ್
ಏಕದಿನ ಮಾದರಿ ಟೂರ್ನಿ: ಈ ಬಾರಿಯ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ. ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ 50 ಓವರ್ಗಳ ಸ್ವರೂಪದಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಲಾಗಿದೆ. ಅಂದರೆ ಆಯಾ ಏಷ್ಯಾಕಪ್ನ ನಂತರ ಐಸಿಸಿ ಟೂರ್ನಿ ಜರುಗುತ್ತಿದ್ದರೆ ಅದೇ ಸ್ವರೂಪದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. ಕಳೆದ ವರ್ಷ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಏಷ್ಯಾಕಪ್ ಅನ್ನು ಕೂಡ ಟಿ20 ಮಾದರಿಯಲ್ಲಿ ಆಯೋಜಿಸಲಾಗಿತ್ತು. ಇದೀಗ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಏಷ್ಯಾಕಪ್ ಕೂಡ 50 ಓವರ್ಗಳಲ್ಲಿ ನಡೆಯಲಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…