ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಎರಡು ಚಿನ್ನ, ತಲಾ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ.
50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ ಚಿನ್ನದ ಪದಕ ಗೆದ್ದಿದ್ದಾರೆ.
ಮಹಿಳೆಯರ 25 ಮೀ. ಏರ್ ರೈಫಲ್ ವಿಭಾಗದಲ್ಲಿ ಸ್ಪರ್ಧಿಸಿದ ಮನು ಭಾಕರ್, ದಿವ್ಯಾಂಶ್ ಸಿಂಗ್ ಪನ್ವರ್, ರಿದಂ ಸಂಗ್ವಾನ್ ಅವರನ್ನು ಒಳಗೊಂಡ ತಂಡವು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.
ಆಶೀ ಚೌಕಸೆ, ಮಾನಿನಿ ಕೌಶಿಕ್ ಮತ್ತು ಸಿಫ್ ಕೌರ್ ಸಮ್ರಾ ಅವರನ್ನೊಳಗೊಂಡ ಮಹಿಳೆಯರ ತಂಡ 50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದೆ.
ಸ್ವೀಟ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಂಗದ್‌ವೀರ್ ಸಿಂಗ್, ಗುರುಜೋತ್ ಸಿಂಗ್ ಮತ್ತು ಆನಂದ್ ಜೀತ್ ಸಿಂಗ್ ಅವರನ್ನು ಒಳಗೊಂಡ ತಂಡವು 355 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಉಳಿದಂತೆ 362 ಅಂಕಗಳೊಂದಿಗೆ ಚೀನಾ ಚಿನ್ನದ ಪದಕ ಗೆದ್ದರೆ, 359 ಅಂಕಗಳೊಂದಿಗೆ ಕತಾರ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.