ಕ್ರೀಡೆ

ಏಷ್ಯನ್ ಗೇಮ್ಸ್ 2023 : ಬಾಂಗ್ಲಾದೇಶವನ್ನು ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ.

ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ನಾುಂಕತ್ವದ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಜಯ ಸಾಧಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡ ಬಲಿಷ್ಠ ಸ್ಮೃತಿ ಮಂದಾನ ಪಡೆಯ ಬೌಲಿಂಗ್ ಎದುರು ತತ್ತರಿಸಿತು. 17.5 ಓವರ್‌ಗಳಿಗೆ 51 ರನ್ ಗಳಿಸಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. 52 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ 8.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಅಲ್ಲದೆ, ಗ್ರ್ಯಾಂಡ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

ಬಾಂಗ್ಲಾ ನೀಡಿದ್ದ ಸಾಧಾರಣ ಗುರಿಯನ್ನು ಬೆಟ್ಟಿದ ಟೀಂ ಇಂಡಿಯಾ ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ನಾಯಕ ಸ್ಮೃತಿ ಮಂದಾನ ವಿಕೆಟ್ ಕಳೆದುಕೊಂಡಿತು. ಕೇವಲ 7 ರನ್ ಗಳಿಸಿ ಮಂದಾನ ವಾರುಫಾ ಅಕ್ಟರ್ ಎಸೆತದಲ್ಲಿ ಶಮೀವಾ ಸುಲ್ತಾನಾಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಶಫಾಲಿ ವರ್ವಾ ಮತ್ತು ಜೆಮಿಮ ರಾಡ್ರಿಗಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಶಫಾಲಿ ವರ್ವಾ ಔಟ್‌ ಆಗದೇ 17 ರನ್ ಗಳಿಸಿ ಜೆಮಿಮ ರಾಡ್ರಿಗಸ್ ಔಟಾಗದೆ 20 ರನ್ ಗಳಿಸಿದರೆ, ಕನಿಕಾ ಅಹುಜಾ 1 ರನ್ ಗಳಿಸಿ ಔಟಾಗದೆ ಉಳಿದರು. ಬಾಂಗ್ಲಾ ಪರ ವಾರುಫಾ ಅಕ್ಟರ್ ಮತ್ತು ಫಾಹಿವಾ ಖಾತುನ್ ತಲಾ 1 ವಿಕೆಟ್ ಪಡೆದರು.

ಮೊದಲು ಬ್ಯಾಟಿಂಗ್ ವಾಡಿದ ಬಾಂಗ್ಲಾದೇಶ ಆಟಗಾರ್ತಿುಂರು ಟೀಂ ಇಂಡಿಾಂದ ಬೌಲರ್‌ಗಳ ಎದುರು ಪೆಲಿವಿುಂನ್ ಪೆರೇಡ್ ನಡೆಸಿದರು. ನಾುಂಕಿ ನಿಗರ್ ಸುಲ್ತಾನಾ ಅವರು 12 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವೊಬ್ಬ ಆಟಗಾರ್ತಿಯೂ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.

ಶಾತಿ ರಾಣಿ (0), ಶಮೀವಾ ಸುಲ್ತಾನಾ (0), ಸೋಭಾನಾ ಮೊಸ್ತರಿ (8), ಶೋರ್ನಾ ಅಕ್ಟರ್ (0), ರಿತು ಮೋನಿ (8), ಫಾಹಿವಾ ಖಾತುನ್ (೦), ರಬೇಯಾ ಖಾನ್ (3), ಸುಲ್ತಾನ ಖಾತುನ್ (3), ವಾರುಫಾ ಅಕ್ಟರ್ (0), ನಹಿದಾ ಅಕ್ಟರ್ ಔಟಾಗದೆ 9 ರನ್ ಗಳಿಸಿದರು. ಟೀಂ ಇಂಡಿಯಾ ಪರ ಪೂಜಾ ವಸ್ತ್ರಾಕರ್ 4 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್ ಪಡೆದರು. ಟೈಟಾಸ್ ಸಾಧು, ಅಮಂಜೋತ್ ಕೌರ್, ರಾಜೇಶ್ವರಿ ಗಾಯಕ್ವಾಡ್ ಹಾಗೂ ದೇವಿಕಾ ವೈದ್ಯ ತಲಾ 1 ವಿಕೆಟ್ ಪಡೆದರು.

ಇತ್ತ ಎರಡನೇ ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನ ಮಹಿಳಾ ತಂಡವನ್ನು ಬಗ್ಗು ಬಡಿದ ಶ್ರೀಲಂಕಾ ಮಹಿಳಾ ತಂಡ ಫೈನಲ್ ತಲುಪಿದೆ. ಭಾರತ ತಂಡ ಪ್ರಶಸ್ತಿ ಸುತ್ತಿನಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಭಾರತಕ್ಕೆ ಮಹಿಳಾ ಕ್ರಿಕೆಟ್ ತಂಡದಿಂದ ಪದಕ ಖಚಿತವಾಗಿದೆ.

lokesh

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

9 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

9 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

9 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

10 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

10 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

10 hours ago