ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ.
ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ನಾುಂಕತ್ವದ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಜಯ ಸಾಧಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡ ಬಲಿಷ್ಠ ಸ್ಮೃತಿ ಮಂದಾನ ಪಡೆಯ ಬೌಲಿಂಗ್ ಎದುರು ತತ್ತರಿಸಿತು. 17.5 ಓವರ್‌ಗಳಿಗೆ 51 ರನ್ ಗಳಿಸಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. 52 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ 8.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಅಲ್ಲದೆ, ಗ್ರ್ಯಾಂಡ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.
ಬಾಂಗ್ಲಾ ನೀಡಿದ್ದ ಸಾಧಾರಣ ಗುರಿಯನ್ನು ಬೆಟ್ಟಿದ ಟೀಂ ಇಂಡಿಯಾ ಇನ್ನಿಂಗ್ಸ್‌ನ ನಾಲ್ಕನೇ ಓವರ್‌ನಲ್ಲಿ ನಾಯಕ ಸ್ಮೃತಿ ಮಂದಾನ ವಿಕೆಟ್ ಕಳೆದುಕೊಂಡಿತು. ಕೇವಲ 7 ರನ್ ಗಳಿಸಿ ಮಂದಾನ ವಾರುಫಾ ಅಕ್ಟರ್ ಎಸೆತದಲ್ಲಿ ಶಮೀವಾ ಸುಲ್ತಾನಾಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಶಫಾಲಿ ವರ್ವಾ ಮತ್ತು ಜೆಮಿಮ ರಾಡ್ರಿಗಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಶಫಾಲಿ ವರ್ವಾ ಔಟ್ ಆಗದೇ 17 ರನ್ ಗಳಿಸಿ ಜೆಮಿಮ ರಾಡ್ರಿಗಸ್ ಔಟಾಗದೆ 20 ರನ್ ಗಳಿಸಿದರೆ, ಕನಿಕಾ ಅಹುಜಾ 1 ರನ್ ಗಳಿಸಿ ಔಟಾಗದೆ ಉಳಿದರು. ಬಾಂಗ್ಲಾ ಪರ ವಾರುಫಾ ಅಕ್ಟರ್ ಮತ್ತು ಫಾಹಿವಾ ಖಾತುನ್ ತಲಾ 1 ವಿಕೆಟ್ ಪಡೆದರು.
ಮೊದಲು ಬ್ಯಾಟಿಂಗ್ ವಾಡಿದ ಬಾಂಗ್ಲಾದೇಶ ಆಟಗಾರ್ತಿುಂರು ಟೀಂ ಇಂಡಿಾಂದ ಬೌಲರ್‌ಗಳ ಎದುರು ಪೆಲಿವಿುಂನ್ ಪೆರೇಡ್ ನಡೆಸಿದರು. ನಾುಂಕಿ ನಿಗರ್ ಸುಲ್ತಾನಾ ಅವರು 12 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವೊಬ್ಬ ಆಟಗಾರ್ತಿಯೂ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ.
ಶಾತಿ ರಾಣಿ (0), ಶಮೀವಾ ಸುಲ್ತಾನಾ (0), ಸೋಭಾನಾ ಮೊಸ್ತರಿ (8), ಶೋರ್ನಾ ಅಕ್ಟರ್ (0), ರಿತು ಮೋನಿ (8), ಫಾಹಿವಾ ಖಾತುನ್ (೦), ರಬೇಯಾ ಖಾನ್ (3), ಸುಲ್ತಾನ ಖಾತುನ್ (3), ವಾರುಫಾ ಅಕ್ಟರ್ (0), ನಹಿದಾ ಅಕ್ಟರ್ ಔಟಾಗದೆ 9 ರನ್ ಗಳಿಸಿದರು. ಟೀಂ ಇಂಡಿಯಾ ಪರ ಪೂಜಾ ವಸ್ತ್ರಾಕರ್ 4 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್ ಪಡೆದರು. ಟೈಟಾಸ್ ಸಾಧು, ಅಮಂಜೋತ್ ಕೌರ್, ರಾಜೇಶ್ವರಿ ಗಾಯಕ್ವಾಡ್ ಹಾಗೂ ದೇವಿಕಾ ವೈದ್ಯ ತಲಾ 1 ವಿಕೆಟ್ ಪಡೆದರು.
ಇತ್ತ ಎರಡನೇ ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನ ಮಹಿಳಾ ತಂಡವನ್ನು ಬಗ್ಗು ಬಡಿದ ಶ್ರೀಲಂಕಾ ಮಹಿಳಾ ತಂಡ ಫೈನಲ್ ತಲುಪಿದೆ. ಭಾರತ ತಂಡ ಪ್ರಶಸ್ತಿ ಸುತ್ತಿನಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಭಾರತಕ್ಕೆ ಮಹಿಳಾ ಕ್ರಿಕೆಟ್ ತಂಡದಿಂದ ಪದಕ ಖಚಿತವಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…