ಹಾಂಗ್‌ಝೌ : ಭಾರತದ ಅನಾಹತ್ ಸಿಂಗ್ ಹಾಗೂ ಅಭಯ್ ಸಿಂಗ್ ಜೋಡಿ ಏಷ್ಯನ್ ಕ್ರೀಡಾಕೂಟದ ಸ್ಮಾಷ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆದಾಗ್ಯೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು.
ಮಲೇಷ್ಯಾದ ಐಫಾ ಬಿಂಟಿ ಅಜಂ ಮತ್ತು ಮೊಹಮ್ಮದ್ ಸೈಫಿಕ್ ಕಮಾಲ್ ಅವರಿಂದ ಕಠಿಣ ಪೈಪೋಟಿ ಎದುರಿಸಿದ ಭಾರತದ ಜೋಡಿ 39 ನಿಮಿಷ ನಡೆದ ಹಣಾಹಣಿಯಲ್ಲಿ 11-8, 2-11, 9-11 ಅಂತರದಿಂದ ಸೋಲೊಪ್ಪಿಕೊಂಡಿತು.
ಇದೇ ದಿನ ನಡೆದ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಭಾರತದವರೇ ಆದ ದೀಪಿಕಾ ಪಲ್ಲಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಹಾಂಗ್ ಕಾಂಗ್ ಆಟಗಾರರ ಎದುರು ಜಯ ಸಾಧಿಸಿದೆ. ಫೈನಲ್‌ಗೆ ಲಗ್ಗೆ ಇಟ್ಟಿರುವ ಈ ತಂಡ ಮತ್ತೊಂದು ಪದಕವನ್ನು ಖಾತ್ರಿಪಡಿಸಿದೆ.
ಅನಾಹತ್ ಹಾಗೂ ಅಭಯ್ ಗಳಿಸಿದ ಪದಕವು, ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತಕ್ಕೆ ದೊರೆತ 70ನೇ ಪದಕ. 2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಭಾರತದ ಶ್ರೇಷ್ಠ ಸಾಧನೆಯಾಗಿತ್ತು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…