ಹ್ಯಾಂಗ್‌ಝೌ: ಭಾರತದ ಅಥ್ಲೀಟ್‌ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ. ಶನಿವಾರ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ ಪುರುಷರ 10000 ಮೀಟರ್ಸ್ ಓಟದಲ್ಲಿ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು.
ಕಾರ್ತಿಕ್ 28:15.38 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದರೆ, ಗುಲ್ವೀರ್ 28:17.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದರು. ಇಬ್ಬರೂ ಭಾರತೀಯರು ಅಂತಿಮ 100 ಮೀಟರ್‌ನಲ್ಲಿ ಪದಕಕ್ಕಾಗಿ ಪೈಪೋಟಿಯಲ್ಲಿದ್ದಾಗ ಆಟಗಾರರು ಪರಸ್ಪರ ಡಿಕ್ಕಿ ಹೊಡೆದು ಬಿದ್ದರು. ಬಹ್ರೇನ್‌ನ ಬಿರ್ಹಾನು ಯಮತಾವ್ ಬಲೆವ್ 28:13.62 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದರು.
ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ. ಕ್ರೀಡಾಪಟುಗಳನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಭಾರತದ ಪದಕ ಬೇಟೆ
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಇಲ್ಲಿಯವರೆಗೂ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನ ಪದಕದೊಂದಿಗೆ ಒಟ್ಟಾರೆ 38 ಪದಕಗಳನ್ನು ಗೆದ್ದಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…