ಕ್ರೀಡೆ

ಏಷ್ಯನ್ ಗೇಮ್ಸ್: ಟ್ರ್ಯಾಪ್​ ಶೂಟಿಂಗ್​ ಪುರುಷರ ವಿಭಾಗದಲ್ಲಿ ಭಾರತಕ್ಕೆ ಚಿನ್ನ

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಅದ್ಭುತ ಪ್ರದರ್ಶನ ಭಾನುವಾರವೂ ಮುಂದುವರಿದಿದೆ. ಭಾನುವಾರ ನಡೆದ 50 ಮೀಟರ್ ಟ್ರ್ಯಾಪ್ ಶೂಟಿಂಗ್ ಪುರುಷರ​ ವಿಭಾಗದಲ್ಲಿ ಭಾರತದ ತಂಡ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೋರವರ್ ಸಿಂಗ್ ಸಂಧು ಅವರ ತಂಡ ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದುಕೊಟ್ಟಿದೆ.

ಅಂತಿಮ ಸುತ್ತಿನಲ್ಲಿ ಕಿನಾನ್ ಚೆನೈ ಪರಿಪೂರ್ಣ 25ಕ್ಕೆ 25 ಅಂಕ ಗಳಿಸಿದರೆ, ಅಂತಿಮವಾಗಿ ಈ ಮೂವರು 361 ಅಂಕ ಕಲೆಹಾಕಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಈ ವಿಭಾಗದಲ್ಲಿ ಭಾರತ ಚಿನ್ನ ಗೆದ್ದರೆ, ಕುವೈತ್ ಮತ್ತು ಚೀನಾ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕವನ್ನು ಗೆದ್ದವು. ಇದುವರೆಗೆ ನಡೆದಿರುವ ಸ್ಪರ್ಧೆಯಲ್ಲಿ ಭಾರತ ಕೇವಲ ಶೂಟಿಂಗ್‌ನಲ್ಲಿಯೇ 7 ಚಿನ್ನದ ಪದಕ ಗೆದ್ದು ದಾಖಲೆ ಬರೆದಿದ್ದಾರೆ.

ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ ಕೇವಲ ಶೂಟಿಂಗ್ ವಿಭಾಗ ಒಂದರಲ್ಲೇ 7 ಚಿನ್ನ, 9 ಬೆಳ್ಳಿ, 5 ಕಂಚು ಸೇರಿದಂತೆ ಒಟ್ಟು 21 ಪದಕಗಳು ಬಂದಿವೆ. ಇನ್ನಷ್ಟು ಬರುವ ನಿರೀಕ್ಷೆಗಳಿವೆ.

ಇದಕ್ಕೂ ಮೊದಲು ಜಕಾರ್ತಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಅತಿ ಹೆಚ್ಚು 16 ಚಿನ್ನ ಗೆದ್ದಿತ್ತು. ಈ ಬಾರಿ ಆ ದಾಖಲೆ ಮುರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

7 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

9 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

10 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

10 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

10 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

10 hours ago