ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.
ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 ಅಂತರದಲ್ಲಿ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿತು. ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು 34-34 ರಿಂದ ಟೈ ಆಗಿದ್ದವು. ಮೊದಲಾರ್ಧದಲ್ಲಿ ಭಾರತದ ರೈಡರ್ಸ್ ಆರು ಬೋನಸ್ ಅಂಕಗಳನ್ನು ಗಳಿಸಿದರು.
ದ್ವಿತೀಯಾರ್ಧದಲ್ಲಿ ಚೈನೀಸ್ ತೈಪೆ ಮುನ್ನಡೆ ಸಾಧಿಸಿ 16 ಅಂಕ ಗಳಿಸಿದರೆ, ಭಾರತೀಯರು ಕೇವಲ 12 ಅಂಕ ಗಳಿಸಲಷ್ಟೇ ಶಕ್ತರಾದರು. ಆದರೆ, ಭಾರತದ ರೈಡರ್ಸ್ ಎರಡು ಬೋನಸ್ ಅಂಕಗಳನ್ನು ಗಳಿಸಿದರು. ಅಂತಿಮವಾಗಿ ಮೊದಲಾರ್ಧದಲ್ಲಿನ ತಮ್ಮ ಅಮೋಘ ಪ್ರದರ್ಶನದಿಂದಾಗಿ, ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಬಡ್ಡಿ ಆಟಗಾರರು ಚೈನೀಸ್ ತೈಪೆ ವಿರುದ್ಧ 26-25 ಅಂತರದಿಂದ ಜಯಗಳಿಸಿ ಚಿನ್ನದ ಪದಕ ಪಡೆದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಕ್ರೀಡಾ ಪ್ರಾಧಿಕಾರ, “ಸಂಪೂರ್ಣ ಪ್ರಾಬಲ್ಯ! ನಮ್ಮ ಮಹಿಳಾ ಕಬಡ್ಡಿ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ, ಚೈನೀಸ್ ತೈಪೆ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮಹಿಳಾ ತಂಡದ ಅಪ್ರತಿಮ ಕೌಶಲ್ಯ, ದೃಢತೆ ಮತ್ತು ಟೀಮ್ ವರ್ಕ್ ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಮತ್ತು ಭಾರತವು ಇದುವರೆಗೆ 100 ಪದಕಗಳು ಜಯಸಿದೆ ಎಂದು ಹೇಳಿದೆ.
ಪ್ರಧಾನಿ ಮೋದಿ ಅಭಿನಂದನೆ: ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ನಮ್ಮ ಕಬಡ್ಡಿ ಮಹಿಳಾ ತಂಡ ಚಿನ್ನಕ್ಕೆ ಕೊರಳೊಡ್ಡಿದೆ! ಈ ಗೆಲುವು ನಮ್ಮ ಮಹಿಳಾ ಕ್ರೀಡಾಪಟುಗಳ ಅದಮ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ಇದೆ. ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…