ಕ್ರೀಡೆ

ಏಷ್ಯನ್ ಗೇಮ್ಸ್: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ-ಭಾರತ 100 ಪದಕಗಳ ಸಾಧನೆ!

ಹ್ಯಾಂಗ್‌ಝೌ: ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.

ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 ಅಂತರದಲ್ಲಿ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿತು. ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು 34-34 ರಿಂದ ಟೈ ಆಗಿದ್ದವು. ಮೊದಲಾರ್ಧದಲ್ಲಿ ಭಾರತದ ರೈಡರ್ಸ್ ಆರು ಬೋನಸ್ ಅಂಕಗಳನ್ನು ಗಳಿಸಿದರು.

ದ್ವಿತೀಯಾರ್ಧದಲ್ಲಿ ಚೈನೀಸ್ ತೈಪೆ ಮುನ್ನಡೆ ಸಾಧಿಸಿ 16 ಅಂಕ ಗಳಿಸಿದರೆ, ಭಾರತೀಯರು ಕೇವಲ 12 ಅಂಕ ಗಳಿಸಲಷ್ಟೇ ಶಕ್ತರಾದರು. ಆದರೆ, ಭಾರತದ ರೈಡರ್ಸ್ ಎರಡು ಬೋನಸ್ ಅಂಕಗಳನ್ನು ಗಳಿಸಿದರು. ಅಂತಿಮವಾಗಿ ಮೊದಲಾರ್ಧದಲ್ಲಿನ ತಮ್ಮ ಅಮೋಘ ಪ್ರದರ್ಶನದಿಂದಾಗಿ, ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಬಡ್ಡಿ ಆಟಗಾರರು ಚೈನೀಸ್ ತೈಪೆ ವಿರುದ್ಧ 26-25 ಅಂತರದಿಂದ ಜಯಗಳಿಸಿ ಚಿನ್ನದ ಪದಕ ಪಡೆದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಕ್ರೀಡಾ ಪ್ರಾಧಿಕಾರ, “ಸಂಪೂರ್ಣ ಪ್ರಾಬಲ್ಯ! ನಮ್ಮ ಮಹಿಳಾ ಕಬಡ್ಡಿ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ, ಚೈನೀಸ್ ತೈಪೆ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮಹಿಳಾ ತಂಡದ ಅಪ್ರತಿಮ ಕೌಶಲ್ಯ, ದೃಢತೆ ಮತ್ತು ಟೀಮ್ ವರ್ಕ್ ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಮತ್ತು ಭಾರತವು ಇದುವರೆಗೆ 100 ಪದಕಗಳು ಜಯಸಿದೆ ಎಂದು ಹೇಳಿದೆ.

ಪ್ರಧಾನಿ ಮೋದಿ ಅಭಿನಂದನೆ:  ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ನಮ್ಮ ಕಬಡ್ಡಿ ಮಹಿಳಾ ತಂಡ ಚಿನ್ನಕ್ಕೆ ಕೊರಳೊಡ್ಡಿದೆ! ಈ ಗೆಲುವು ನಮ್ಮ ಮಹಿಳಾ ಕ್ರೀಡಾಪಟುಗಳ ಅದಮ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ಇದೆ. ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ

andolanait

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

4 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

5 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

24 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago