ಹಾಂಗ್‌ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು ವಿರುದ್ಧ 159-158 ಅಂತರದಲ್ಲಿ ಗೆಲುವು ಸಾಧಿಸಿತು.
ಉಭಯ ತಂಡಗಳು ಮೊದಲ ಮೂರು ಸುತ್ತುಗಳಲ್ಲಿ ಕ್ರಮವಾಗಿ 40-39, 40-40 ಮತ್ತು 39-40 ಪಾಯಿಂಟ್ ಗಳಿಸಿದವು. ಹೀಗಾಗಿ ಮೂರನೇ ಸುತ್ತಿನ ಅಂತ್ಯಕ್ಕೆ ಸಮಬಲದ (119-119) ಪೈಪೋಟಿ ನಡೆಸಿದವು. ಅಂತಿಮ ಸುತ್ತಿನಲ್ಲಿ ಭಾರತ 40 ಪಾಯಿಂಟ್ ಗಳಿಸಿದರೆ, ಕೊರಿಯಾ 39 ಪಾಯಿಂಟ್ ಕೆಲಹಾಕಿತು. ಹೀಗಾಗಿ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದು ಜ್ಯೋತಿ ಹಾಗೂ ಓಜಸ್ ಏಷ್ಯನ್ ಗೇಮ್ಸ್‌ನಲ್ಲಿ ಗಳಿಸಿದ ಮೊದಲ ಚಿನ್ನದ ಪದಕವಾಗಿದೆ. ಈ ಇಬ್ಬರು ವೈಯಕ್ತಿಕ ವಿಭಾಗಗಳಲ್ಲಿಯೂ ಫೈನಲ್ ಪ್ರವೇಶಿಸಿದ್ದಾರೆ.
ಈ ಬಾರಿಯ ಕ್ರೀಡಾಕೂಟದಲ್ಲಿ ಇದು ಭಾರತದಲ್ಲಿ ಭಾರತ ಗೆದ್ದ 16ನೇ ಚಿನ್ನದ ಪದಕ ಇದಾಗಿದೆ. ಇದರೊಂದಿಗೆ ಭಾರತ 25 ಬೆಳ್ಳಿ ಹಾಗೂ 29 ಕಂಚಿನ ಪದಕಗಳನ್ನೂ ಜಯಿಸಿದೆ. ಹೀಗಾಗಿ ಈ ಬಾರಿ ಗೆದ್ದ ಒಟ್ಟಾರೆ ಪದಕಗಳ ಸಂಖ್ಯೆಯನ್ನು 71ಕ್ಕೆ ಹೆಚ್ಚಿಸಿಕೊಂಡಿದೆ.2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…