ಬೆಂಗಳೂರು : ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆಯಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಏಷ್ಯನ್ ಗೇಮ್ಸ್ನಲ್ಲಿ ಭಾರತ ಈ ಬಾರಿ 28 ಚಿನ್ನ, 38 ರಜತ ಹಾಗೂ 41 ಕಂಚಿನ ಪದಕಗಳೊಂದಿಗೆ ಒಟ್ಟು 107 ಪದಕಗಳ ಅಭೂತಪೂರ್ವ ಸಾಧನೆಗೈದಿದೆ. ಪದಕ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆಗಳು. ತಮ್ಮ ಸಾಧನೆ ಪ್ರತಿ ಭಾರತೀಯನಿಗೂ ಹೆಮ್ಮೆಯುಂಟುಮಾಡಿದೆ.
ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆ ಎಂದು ಭಾವಿಸಿದ್ದೇನೆ. ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ’ ಎಂದು ಹಾರೈಸಿದ್ದಾರೆ.





