ಹಾಂಗ್‌ಝೌ : ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಮಂದೀಪ್ ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸಿಂಗಪುರ ವಿರುದ್ಧದ ಹಾಕಿ ಪಂದ್ಯದಲ್ಲಿ ಭಾರತ ತಂಡ 16-1 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿದೆ.
ಪಂದ್ಯಾವಳಿಯಲ್ಲಿ ಭಾರತಕ್ಕೆ ಇದು ಎರಡನೇ ಸತತ ಗೆಲುವಾಗಿದೆ. ಉಜೈಕಿಸ್ತಾನ ವಿರುದ್ಧದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ 16-0 ಅಂತರದ ಜಯ ಸಾಧಿಸಿದ್ದ ಭಾರತ ತಂಡ ಗೆಲುವಿನ ಓಟ ಮುಂದುವರಿಸಿದೆ.
ಹರ್ಮನ್ ಪ್ರೀತ್ (24, 39, 40, 42ನೇ ನಿಮಿಷ) ಮತ್ತು ಮಂದೀಪ್ (12, 30, 51ನೇ ನಿಮಿಷ), ಅಭಿಷೇಕ್ (51, 52ನೇ ನಿಮಿಷ), ವರುಣ್ ಕುಮಾರ್ (55, 55ನೇ ನಿಮಿಷ), ಲಲಿತ್ ಕುಮಾರ್ ಉಪಾಧ್ಯಾಯ (16ನೇ ನಿಮಿಷ), ಗುರ್ಜಂತ್ ಸಿಂಗ್ (22ನೇ ನಿಮಿಷ), ವಿವೇಕ್ ಸಾಗರ್ ಪ್ರಸಾದ್ (23ನೇ ನಿಮಿಷ), ಮನ್ ಪ್ರೀತ್ ಸಿಂಗ್ (37ನೇ ನಿಮಿಷ), ಶಂಶೇರ್ ಸಿಂಗ್ (38ನೇ ನಿಮಿಷ) ಗೋಲು ಗಳಿಸಿದರು.
ಭಾರತವು ಗುರುವಾರ ಹಾಲಿ ಚಾಂಪಿಯನ್ ಜಪಾನ್ ಅನ್ನು ಎದುರಿಸಲಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…