ಹಾಂಗ್‌ಝೌ : ಏಶ್ಯನ್ ಗೇಮ್ಸ್‌ನ ಸ್ಕ್ವಾಶ್‌ನಲ್ಲಿ ಭಾರತದ ಪುರುಷರ ತಂಡ ಐತಿಹಾಸಿಕ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಶನಿವಾರ ನಡೆದ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಬಂಗಾರ ಪಡೆಯಿತು.
ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ ಭಾರತ ಮತ್ತೊಮ್ಮೆ ಸ್ಕ್ವಾಷ್ ನಲ್ಲಿ ಚಿನ್ನದ ಪದಕ ಜಯಿಸಿದೆ.
ಮತ್ತೊಂದೆಡೆ ಭಾರತದ ಮತ್ತೋರ್ವ ಆಟಗಾರ ಮಹೇಶ್ ಮಂಗಾಂವ್ಕರ್ ಪಾಕಿಸ್ತಾನದ ಇಕ್ಬಾಲ್ ನಾಸಿರ್‌ಗೆ ಓಪನರ್‌ನಲ್ಲಿ ಒಂದೇ ಅಂತರದಿಂದ ಸೋತ ನಂತರ ಅನುಭವಿ ಸೌರವ್ ಘೋಸಲ್ ಅವರು ಮುಹಮ್ಮದ್ ಅಸಿಮ್ ಖಾನ್ ವಿರುದ್ಧ 3-0 ಗೆಲುವಿನೊಂದಿಗೆ ಭಾರತೀಯರನ್ನು ಮತ್ತೆ ಸ್ಪರ್ಧೆಗೆ ತಂದರು. ಅಂತಿಮವಾಗಿ ಈ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಮಣಿಸಿ ಪದಕ ಜಯಿಸಿದೆ.
ಈ ಹಿಂದೆ ಇದೇ ಕ್ರೀಡಾಕೂಟದ ಲೀಗ್ ಹಂತದ ಪಂದ್ಯದಲ್ಲಿ ಭಾರತ ಇದೇ ಪಾಕಿಸ್ತಾನ ಜೋಡಿಯ ವಿರುದ್ದ ಸೋಲುಕಂಡಿತ್ತು. ಆದರೆ ಫೈನಲ್ ನಲ್ಲಿ ಇದೇ ಜೋಡಿಯನ್ನು ಮಣಿಸುವ ಮೂಲಕ ತನ್ನ ಸೋಲಿನ ಸೇಡು ತೀರಿಸಿಕೊಂಡಿದೆ.
ಭಾರತ ಕೊನೆಯ ಬಾರಿಗೆ 2014 ರಲ್ಲಿ ಇಂಚೆನ್‌ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಪುರುಷರ ತಂಡ ಸ್ಕ್ವಾಷ್‌ನಲ್ಲಿ ಚಿನ್ನ ಗೆದ್ದಿದ್ದರೆ, ಪಾಕಿಸ್ತಾನಿಗಳು 2010 ರಲ್ಲಿ ಗುವಾಂಗ್‌ಝೌನಲ್ಲಿ ಕೊನೆಯದಾಗಿ ಚಿನ್ನವನ್ನು ಗೆದ್ದಿದ್ದರು.
ಶನಿವಾರ ಭಾರತ ಮಹಿಳಾ ತಂಡ, ಸೆಮಿಫೈನಲ್‌ನಲ್ಲಿ ಹಾಂಕಾಂಗ್ ವಿರುದ್ಧ 1-2 ಅಂತರದಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…