ಹಾಂಗ್‌ಝೌ: ನವದೆಹಲಿಯಲ್ಲಿ 1982ರಲ್ಲಿ ನಡೆದ ಏಷ್ಯನ್ ಕ್ರೀಡೆಯ ನಂತರ ಚೀನಾದ ಹ್ಯಾಂಗ್ ಝೂನಲ್ಲಿ ನಡೆಯುತ್ತಿರುವ ಏಶ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 41 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ತಂಡ ಕುದುರೆ ಸವಾರಿ (ಡೆಸ್ಸೇಜ್ ಟೀಮ್ ಇವೆಂಟ್) ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ.
ದಿವ್ಯಕೃತಿ ಸಿಂಗ್, ಹೃದಯ್ ವಿಪುಲ್ ಛಡ್ ಹಾಗೂ ಅನ್ನು ಅಗರ್ವಾಲ್ ಅವರಿದ್ದ ತಂಡ 209.205 ಶೇಕಡಾವಾರು ಅಂಕಗಳೊಂದಿಗೆ ಚಿನ್ನಕ್ಕೆ ಮುತ್ತಿಕ್ಕಿತು.
ಇದೇ ತಂಡದಲ್ಲಿ ಸುದೀಪ್ತಿ ಹಜೆವಾಲಾ ಅವರೂ ಇದ್ದರು. ಆದರೆ ಹೆಚ್ಚಿನ ಅಂಕ ಪಡೆದ ಮೊದಲ ಮೂವರ ಹೆಸರನ್ನು ಪರಿಗಣಿಸಲಾಗಿದೆ. 204.882 ಶೇಖಡಾವಾರು ಅಂಕಗಳೊಂದಿಗೆ ಚೀನಾ ಎರಡನೇ ಸ್ಥಾನ ಪಡೆಯಿತು. ಹಾಂಕಾಂಗ್ 204.852 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.
1986ರಲ್ಲಿ ನಡೆದ ಇದೇ ಪಂದ್ಯಾವಳಿಯಲ್ಲಿ ಭಾರತ ಕಂಚಿನ ಪದಕ ಪಡೆದುಕೊಂಡಿತ್ತು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…