ಹ್ಯಾಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ ಅವರ 50 ಮೀಟರ್ ರೈಫಲ್ 3ಕೆ ಪುರುಷರ ಭಾರತ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತು.
2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಶೂಟಿಂಗ್‍ನಲ್ಲಿ ಇದು 15ನೇ ಪದಕ ಮತ್ತು 7ನೇ ಚಿನ್ನವಾಗಿದೆ. ಭಾರತವು 1769 ಅಂಕಗಳ ಗಮನಾರ್ಹ ಅಂಕಗಳಿಸಿತು, ಕಳೆದ ವರ್ಷ ಪೆರುವಿನಲ್ಲಿ ಯುಎಸ್‍ಎನ ಹಿಂದಿನ ದಾಖಲೆಯನ್ನು 8 ಅಂಕಗಳಿಂದ ಮೀರಿಸಿದೆ.
ಗ್ರೂಪ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸುವುದರೊಂದಿಗೆ ಇಶಾ ಮತ್ತು ಪಾಲಕ್ ವೈಯಕ್ತಿಕ ಸ್ಪರ್ಧೆಯಲ್ಲೂ ಫೈನಲ್ ತಲುಪಿದ್ದಾರೆ. 10 ವರ್ಷದ ಇಶಾ ಸಿಂಗ್ ಈಗ ಏಷ್ಯನ್ ಗೇಮ್ಸ್ 2023 ರಲ್ಲಿ ತನ್ನ ನಾಲ್ಕನೇ ಪದಕ ಗೆಲ್ಲುವ ಅವಕಾಶವನ್ನು ಹೊಂದಿದ್ದಾರೆ. ಈ ಹಿಂದೆ 25 ಮೀಟರ್ ಪಿಸ್ತೂಲ್ ಟೀಮ್ ವಿಭಾಗದಲ್ಲಿ ಚಿನ್ನ ಹಾಗೂ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಗೆದ್ದಿದ್ದರು.
ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ಏಷ್ಯನ್ ಗೇಮ್ಸ್ ನಲ್ಲಿ ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದಿವ್ಯಾ ತಾಡಿಗೋಳ್, ಇಶಾ ಸಿಂಗ್ ಮತ್ತು ಪಾಲಕ್ ಅವರಿಗೆ ಅಭಿನಂದನೆಗಳು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…