Mysore
26
light rain

Social Media

ಭಾನುವಾರ, 03 ನವೆಂಬರ್ 2024
Light
Dark

ಏಷ್ಯನ್ ಗೇಮ್ಸ್: ಗಾಲ್ಫ್‌ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಅದಿತಿ ಅಶೋಕ್

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ.

ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್‌ ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.

ಶನಿವಾರ 3ನೇ ಸುತ್ತಿನ ಪಂದ್ಯದ ಬಳಿಕ ಅದಿತಿ ಚಿನ್ನ ಗಳಿಸಲು ಹೆಜ್ಜೆಯಿಟ್ಟಿದ್ದರು. 7 ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಆರಂಭಿಸಿದ ಅವರಿಗೆ ಮೊದಲ ಸ್ಥಾನವನ್ನು ಗಳಿಸಲು ಉತ್ತಮ ಅವಕಾಶವಿತ್ತು. ಆದರೆ ಕೊನೆಯ 3 ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಥೈಲ್ಯಾಂಡ್‌ನ ಅರ್ಪಿಚುಯಾ ಯುಬೋಲ್ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ.

ಈ ಹಿಂದೆ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗಾಲ್ಫ್‌ನಲ್ಲಿ 4ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಇದೀಗ ಏಷ್ಯನ್ ಗೇಮ್ಸ್‌ನಲ್ಲಿ ಅದಿತಿ ಪದಕ ಗೆದ್ದು ಬೀಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ