ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ.
ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್ ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.
ಶನಿವಾರ 3ನೇ ಸುತ್ತಿನ ಪಂದ್ಯದ ಬಳಿಕ ಅದಿತಿ ಚಿನ್ನ ಗಳಿಸಲು ಹೆಜ್ಜೆಯಿಟ್ಟಿದ್ದರು. 7 ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಆರಂಭಿಸಿದ ಅವರಿಗೆ ಮೊದಲ ಸ್ಥಾನವನ್ನು ಗಳಿಸಲು ಉತ್ತಮ ಅವಕಾಶವಿತ್ತು. ಆದರೆ ಕೊನೆಯ 3 ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಥೈಲ್ಯಾಂಡ್‌ನ ಅರ್ಪಿಚುಯಾ ಯುಬೋಲ್ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ.
ಈ ಹಿಂದೆ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗಾಲ್ಫ್‌ನಲ್ಲಿ 4ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಇದೀಗ ಏಷ್ಯನ್ ಗೇಮ್ಸ್‌ನಲ್ಲಿ ಅದಿತಿ ಪದಕ ಗೆದ್ದು ಬೀಗಿದ್ದಾರೆ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…