ಹಾಂಗ್ಝೌ: ಏಶ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, 10 ಮೀಟರ್ಸ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡವು ಚಿನ್ನ ಗೆದ್ದಿದೆ. ಈ ಮೂಲಕ ಶೂಟಿಂಗ್ನಲ್ಲಿ ಭಾರತ ನಾಲ್ಕನೇ ಚಿನ್ನದ ಪದಕ ಗೆದ್ದಿದೆ.
ಸರಬ್ಬೋತ್ ಸಿಂಗ್, ಅರ್ಜುನ್ ಸಿಂಗ್ ಚೀಮಾ ಮತ್ತು ಶಿವ ನರ್ವಾಲ್ ಅವರ ತಂಡವು ಚೀನಾ ತಂಡವನ್ನು ಸೋಲಿಸುವ ಮೂಲಕ ಪದಕ ಜಯಿಸಿತು. ಈ ಮೂಲಕ ಶೂಟಿಂಗ್ನಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನದ ಪದಕವನ್ನು ಗಳಿಸಿಕೊಟ್ಟಿತು.
ಭಾರತದ ತಂಡವು ಒಟ್ಟು 1734 ಅಂಕಗಳನ್ನು ಪಡೆಯುವ ಮೂಲಕ ಚೀನೀ ತಂಡಕ್ಕೆ ಕೇವಲ ಒಂದು ಅಂಕದಿಂದ ಸೋಲುಣಿಸಿತು. ವಿಯೆಟ್ನಾಂ 1730 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದಿತು.
ಸರಬೋತ್ ಮತ್ತು ಅರ್ಜುನ್ ಎಂಟು ಶೂಟರ್ಗಳ ಫೈನಲ್ಗೂ ಪ್ರವೇಶಿಸಿದ್ದು, ವೈಯಕ್ತಿಕ ಪದಕಗಳಿಗೂ ಸ್ಪರ್ಧೆಯಲ್ಲಿದ್ದಾರೆ.
ಭಾರತದ ಶೂಟರ್ಗಳು ಇದುವರೆಗೆ ನಾಲ್ಕು ಚಿನ್ನ, ನಾಲ್ಕು ಬೆಳ್ಳಿ ಮತ್ತು ಐದು ಕಂಚಿನ ಪದಕಗಳನ್ನು ಗೆದ್ದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…