ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಪುರುಷರ ರೋಯಿಂಗ್ ಫೈನಲ್‌ನಲ್ಲಿ ಭಾರತ ತಂಡ ಕಂಚಿನ ಪದಕ ಜಯಿಸಿದೆ.
ಜಸ್ವಿಂದರ್ ಸಿಂಗ್, ಭೀಮ್ ಸಿಂಗ್, ಪುನೀತ್ ಕುಮಾರ್, ಆಶಿಶ್ ಕುಮಾರ್ ಒಳಗೊಂಡ ಭಾರತ ರೋಯಿಂಗ್ ತಂಡ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿತು.
ಭಾರತ ತಂಡ 6:10:81 ಸೆಕೆಂಡ್‌ನಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದುಕೊಂಡಿತು. ಚೀನಾ 6:10:04 ಸೆಕೆಂಡ್‌ನಲ್ಲಿ ಗುರಿ ತಲುಪಿ ಚಿನ್ನಕ್ಕೆ ಮುತ್ತಿಟ್ಟಿತು. ಉಜ್ಬೇಕಿಸ್ತಾನ್ ಬೆಳ್ಳಿ ಪಡಕ ಜಯಿಸಿತು.
ಪುರುಷರ ಸಿಂಗಲ್ಸ್ ಸ್ಕಲ್ಸ್ ಸ್ಪರ್ಧೆಯ ಫೈನಲ್‌ನಲ್ಲಿ ಭಾರತದ ರೋವರ್ ಬಲರಾಜ್ ಪನ್ವಾರ್ ನಾಲ್ಕನೇ ಸ್ಥಾನ ಪಡೆದರು.