Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಏಷ್ಯನ್ ಗೇಮ್ಸ್​: ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಹ್ಯಾಂಗ್​ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

ಬುಧವಾರ ನಡೆದ ಏಷ್ಯನ್ ಗೇಮ್ಸ್​ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್​ ಜೆನ್ನಾ 87.54 ಮೀಟರ್​ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ನಡೆದ ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್​ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.

ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ