ಹ್ಯಾಂಗ್ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ ಗೇಮ್ಸ್ನಲ್ಲಿ ನೀರಜ್ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದರು. ಇದೀಗ ಮತ್ತೊಮ್ಮೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.
ಬುಧವಾರ ನಡೆದ ಏಷ್ಯನ್ ಗೇಮ್ಸ್ ಜಾವೆಲಿನ್ ಫೈನಲ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಬರೋಬ್ಬರಿ 88.88 ಮೀಟರ್ ದೂರಕ್ಕೆ ಭರ್ಜಿ ಎಸೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದರು. ವಿಶೇಷ ಎಂದರೆ ಭಾರತದವರೇ ಆದ ಕಿಶೋರ್ ಜೆನ್ನಾ 87.54 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನ ಪಡೆದರು. ಈ ಮೂಲಕ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಹಾಗೂ ಕಿಶೋರ್ ಜೆನ್ನಾ ಭಾರತಕ್ಕೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತಂದುಕೊಟ್ಟಿದ್ದಾರೆ.
ಇತ್ತೀಚೆಗಷ್ಟೇ ನಡೆದ ವರ್ಲ್ಡ್ ಚಾಂಪಿಯನ್ಶಿಪ್ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ನಡೆದ ಡೈಮಂಡ್ ಲೀಗ್ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ ಏಷ್ಯನ್ ಗೇಮ್ಸ್ ಮೂಲಕ ಮತ್ತೊಮ್ಮೆ ಬಂಗಾರಕ್ಕೆ ಪದಕಕ್ಕೆ ಕೊರೊಳೊಡ್ಡಿರುವುದು ವಿಶೇಷ.
ರಿಲೇನಲ್ಲೂ ಚಿನ್ನ ಓಟ: ಪುರುಷರ 4×400 ಮೀ ರಿಲೇಯಲ್ಲಿ ಭಾರತೀಯರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಅಮೋಜ್ ಜೇಕಬ್, ಮುಹಮ್ಮದ್ ಅನಸ್ ಯಾಹಿಯಾ, ರಾಜೇಶ್ ರಮೇಶ್ ಮತ್ತು ಮುಹಮ್ಮದ್ ಅಜ್ಮಲ್ ಅವರನ್ನೊಳಗೊಂಡ ಭಾರತ ತಂಡವು 3:01.58 ನಿಮಿಷದಲ್ಲಿ ಗುರಿ ಮುಟ್ಟುವ ಮೂಲಕ ಬಂಗಾರದ ಪದಕ ಗೆದ್ದುಕೊಂಡರು.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…