ಕ್ರೀಡೆ

ಏಷ್ಯನ್‌ ಗೇಮ್ಸ್:‌ ಸೇಲಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದ ನೇಹಾ ಠಾಕೂರ್

ನಿಂಗೊ (ಚೀನಾ): ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸೇಲಿಂಗ್‌ನಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಜಯಿಸಿದ್ದಾರೆ. ಮಹಿಳೆಯರ ಡಿಂಘಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.

ಭೋಪಾಲ್‌ನ ನ್ಯಾಷನಲ್ ಸೇಲಿಂಗ್ ಸ್ಕೂಲ್‌ನ ಉದಯೋನ್ಮುಖ ಸೇಲಿಂಗ್ ಪಟು ನೇಹಾ ಒಟ್ಟು 32 ಅಂಕಗಳೊಂದಿಗೆ ಸ್ಪರ್ಧೆ ಮುಗಿಸಿದರು. ಅವರ ನೆಟ್ ಸ್ಕೋರ್ 27 ಆಗಿದ್ದರಿಂದ ಬೆಳ್ಳಿಗೆ ತೃಪ್ತಿ ಪಡಬೇಕಾಯಿತು. 16 ನೆಟ್ ಸ್ಕೋರ್ ಇದ್ದ ಥಾಯ್ಲೆಂಡ್‌ನ ನೊಪಾಸ್ಪೋರ್ನ್ ಖುನ್‌ಬೂಂಜಾನ್ ಚಿನ್ನ ಗೆದ್ದರು.

28 ನೆಟ್ ಸ್ಕೋರ್ ಇದ್ದ ಸಿಂಗಪುರದ ಕೀರಾ ಮೇರಿ ಕಾರ್ಲೈಲ್ ನೆಟ್ರೋರ್ ಕಂಚಿನ ಪದಕ ಗೆದ್ದರು.

ಸೇಲಿಂಗ್‌ನಲ್ಲಿ ನೆಟ್ ಸ್ಕೋರ್ ಅನ್ನು ನಿರ್ಧರಿಸಲು ಎಲ್ಲಾ ರೇಸ್‌ಗಳಿಂದ ಸ್ಪರ್ಧಿಯ ಕೆಟ್ಟ ಸ್ಕೋರ್ ಅನ್ನು ಒಟ್ಟು ಅಂಕಗಳಿಂದ ಕಳೆಯಲಾಗುತ್ತದೆ. ಕಡಿಮೆ ನೆಟ್ ಸ್ಕೋರ್ ಹೊಂದಿರುವವರನ್ನು ವಿಜೇತ ಎಂದು ನಿರ್ಣಯಿಸಲಾಗುತ್ತದೆ.

ಮಹಿಳೆಯರ ಡಿಂಘಿ ILCA-4 ವಿಭಾಗವು 11 ರೇಸ್‌ಗಳನ್ನು ಒಳಗೊಂಡಿದೆ. ನೇಹಾ ಒಟ್ಟು 32 ಅಂಕಗಳೊಂದಿಗೆ ಸ್ಪರ್ಧೆ ಮುಗಿಸಿದರು. ಐದನೇ ರೇಸ್‌ನಲ್ಲಿ ಕೇವಲ 5 ಅಂಕ ಗಳಿಸುವ ಮೂಲಕ ಕೆಟ್ಟ ಪ್ರದರ್ಶನ ನೀಡಿದ ನೇಹಾ, 27 ನೆಟ್ ಸ್ಕೋರ್‌ನೊಂದಿಗೆ ಆಟ ಮುಗಿಸಿದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

2 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

2 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

2 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

2 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

2 hours ago