ಹ್ಯಾಂಗ್‌ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಕ್ರಿಕೆಟ್ ಶಿಶು ನೇಪಾಳ ಅಕ್ಷರಶಃ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದೆ.
ನೇಪಾಳ ತಂಡವು ಮಂಗೋಲಿಯಾ ವಿರುದ್ಧ 20 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಬರೊಬ್ಬರಿ 314 ರನ್ ಗಳ ನಂಬಲಸಾಧ್ಯವಾದ ಸ್ಕೋರ್ ದಾಖಲಿಸಿದೆ. ಈ ಮೊತ್ತದಲ್ಲಿ 9 ಎಸೆತದಲ್ಲಿ ಅರ್ಧಶತಕ, 34 ಬಾಲ್‌ಗಳಲ್ಲಿ ಶತಕಲೂ ಸೇರಿದೆ. ಒಟ್ಟಾರೆ ಕೇವಲ 120 ಎಸೆತಗಳಲ್ಲಿ 300 ರನ್ ದಾಖಲಿಸಿ ನೇಪಾಳ ಅಚ್ಚರಿ ಮೂಡಿಸಿದೆ. ಅಂತೆಯೇ ಚುಟುಕು ಕ್ರಿಕೆಟ್ ಅಂತಾರಾಷ್ಟ್ರೀಯ ಟಿ20ಯಲ್ಲಿ 300 ರನ್ಗಳ ಗಡಿಯನ್ನು ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ನೇಪಾಳ ಪಾತ್ರವಾಗಿದೆ.
ಈ ಬೃಹತ್ ಮೊತ್ತ ಚೇಸ್ ಮಾಡಿದ ಮಂಗೋಲಿಯಾ 13.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 41 ರನ್ ಗಳಿಸಲಷ್ಟೇ ಶಕ್ತವಾಯಿತು. ಕಡಿಮೆ ಮೊತ್ತಕ್ಕೆ ಮಂಗೋಲಿಯಾ ತಂಡವನ್ನು ಕಟ್ಟಿಹಾಕಿದ ನೇಪಾಳ ತಂಡ ಕ್ರಿಕೆಟ್ ಟಿ20 ಯಲ್ಲಿ ಅತೀಹೆಚ್ಚು ರನ್ (273) ಗಳಿಂದ ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಯಿತು.
9 ಎಸೆತಗಳಲ್ಲಿ ಅರ್ಧ ಶತಕ: ಯುವಿ-ರೋಹಿತ್ ದಾಖಲೆ ಪುಡಿಪುಡಿ
2007ರ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಯುವರಾಜ್ ಸಿಂಗ್ ಅವರ ದೀರ್ಘಕಾಲದ ದಾಖಲೆಯನ್ನು ನೇಪಾಳ ಬ್ಯಾಟರ್ ದೀಪೇಂದ್ರ ಸಿಂಗ್ ಐರಿ ಮುರಿದರು. ಅವರು 9 ಎಸೆತಗಳಲ್ಲಿ ಅರ್ಧ ಶತಕ ಬಾರಿಸಿ 10 ಎಸೆತಗಳಲ್ಲಿ ಅಜೇಯ 52 ರನ್ ಗಳಿಸಿದರು, ಅದರಲ್ಲಿ 48 ರನ್ಗಳು ಸಿಕ್ಸರ್‌ಗಳ ಮೂಲಕೇ ಬಂದಿದ್ದವು.
ಮಾತ್ರವಲ್ಲದೇ ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೂ ಮುರಿಯಿತು. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಡೇವಿಡ್ ಮಿಲ್ಲರ್ ಅವರನ್ನು ಹಿಂದಿಕ್ಕಿದ ನೇಪಾಳ ಬ್ಯಾಟರ್ ಕುಶಾಲ್ ಮಲ್ಲಾ ಕೇವಲ 34 ಎಸೆತಗಳಲ್ಲಿ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ವೇಗವಾಗಿ ಶತಕ ಗಳಿಸಿದರು. ಇಬ್ಬರೂ ಬ್ಯಾಟರ್ಗಳಲ್ಲಿ 35 ಎಸೆತಗಳಲ್ಲಿ ಮೂರಂಕಿ ಮೊತ್ತ ದಾಟಿದ್ದರು. ಮಲ್ಲಾ 8 ಬೌಂಡರಿ ಮತ್ತು 12 ಸಿಕ್ಸರ್‌ಗಳನ್ನು ಬಾರಿಸಿ ಕೇವಲ 50 ಎಸೆತಗಳಲ್ಲಿ 137 ರನ್ ಗಳಿಸಿ ಅಜೇಯರಾಗಿ ಉಳಿದರು.
ಸಿಕ್ಸರ್‌ಗಳ ಸುರಿಮಳೆ : ಇಷ್ಟೇ ಅಲ್ಲ ಪಂದ್ಯದ್ದುದ್ದಕ್ಕೂ ಸಿಕ್ಸರ್‌ಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ನೇಪಾಳದ ಬ್ಯಾಟರ್‌ಗಳು ಒಂದೇ ಇನ್ನಿಂಗ್ಸ್‌ನಲ್ಲಿ 26 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಹೊಡಿಬಡಿ ಆಟ ಆಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿಕೊಂಡಿದೆ.
2019 ರಲ್ಲಿ 278/3 ಗಳಿಸಿದಾಗ ಅಫ್ಘಾನಿಸ್ತಾನ 22 ಸಿಕ್ಸ್ ಹೊಡೆದಿತ್ತು, ಈಗ ನೇಪಾಳ 26 ಸಿಕ್ಸ್ ಹೊಡೆಯುವ ಮೂಲಕ ಅಫ್ಘಾನಿಸ್ತಾನದ ದಾಖಲೆಯನ್ನು ಗಾಳಿಗೆ ತೂರಿದೆ.
ಭಾರತದ ಪುರುಷರ ಕ್ರಿಕೆಟ್ ಪಂದ್ಯವು ಅಕ್ಟೋಬರ್ 3 ರಂದು ಕ್ವಾರ್ಟರ್ ಫೈನಲ್‌ನಲ್ಲಿ ಪ್ರಾರಂಭವಾಗಲಿದ್ದು, ಪ್ರಶಸ್ತಿ ಹಣಾಹಣಿ ಅಕ್ಟೋಬರ್ 7 ರಂದು ನಡೆಯಲಿದೆ.
ಟಿ20ಐನಲ್ಲಿ ಗರಿಷ್ಠ ಸ್ಕೋರ್ ಕಲೆ ಹಾಕಿದ ತಂಡಗಳು
1: ನೇಪಾಳ – 314/4 ವಿರುದ್ಧ ಮಂಗೋಲಿಯಾ (2023)
2: ಅಫ್ಘಾನಿಸ್ತಾನ – 278/3 ವಿರುದ್ಧ ಐರ್ಲೆಂಡ್ (2019)
3: ಜೆಕ್ ರಿಪಬ್ಲಿಕ್ – 278/4 ವಿರುದ್ಧ ಟರ್ಕಿ (2019)
4: ಆಸ್ಟ್ರೇಲಿಯಾ – 263/3 ವಿರುದ್ಧ ಶ್ರೀಲಂಕಾ (2016)
5: ಶ್ರೀಲಂಕಾ 260/6 ವಿರುದ್ಧ ಕೀನ್ಯಾ (2007)
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…