ಬೆಂಗಳೂರು : ಚೀನಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕರ್ನಾಟಕದ ಸುಹಾಸ್ ಯತಿರಾಜ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸುಹಾಸ್ ಅವರನ್ನು ಅಭಿನಂದಿಸಿದ್ದಾರೆ. ಸುಹಾಸ್ ಯತಿರಾಜ್ ಅವರು ಕರ್ನಾಟಕ ಮೂಲಕ ಯು.ಪಿ.ಕೇಡರ್ ಐಎಎಸ್ ಅಧಿಕಾರಿ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿರುವ ಕರ್ನಾಟಕ ಮೂಲಕ ಯು.ಪಿ.ಕೇಡರ್ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. ತಮ್ಮ ಅಸಾಧಾರಣ ಪ್ರತಿಭೆ ಮತ್ತು ಅಮೋಘ ಸಾಧನೆ ನಾಡಿನ ಪ್ರತಿಯೊಬ್ಬರಿಗೂ ಹೆಮ್ಮೆಯುಂಟುಮಾಡಿದೆ ಎಂದು ಶ್ಲಾಘಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಸುಹಾಸ್ ಅವರಿಗೆ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ. ಇದು ಹೆಮ್ಮೆಯ ಕ್ಷಣ!! ಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್-4 ವಿಭಾಗದಲ್ಲಿ ಚಿನ್ನವನ್ನು ಗೆದ್ದ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. ರಾಷ್ಟ್ರವು ನಿಮ್ಮ ಯಶಸ್ಸನ್ನು ಆಚರಿಸುತ್ತದೆ. ನಿಮ್ಮ ಮುಂದಿನ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು ಎಂದಿದ್ದಾರೆ.
https://x.com/CMofKarnataka/status/1718192867569709159?s=20





