ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್‌ 2023 : ಚಿನ್ನ ಗೆದ್ದ ಕನ್ನಡಿಗ ಸುಹಾಸ್‌ಗೆ ಸಿಎಂ ಅಭಿನಂದನೆ

ಬೆಂಗಳೂರು : ಚೀನಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಕರ್ನಾಟಕದ ಸುಹಾಸ್ ಯತಿರಾಜ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.

ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸುಹಾಸ್ ಅವರನ್ನು ಅಭಿನಂದಿಸಿದ್ದಾರೆ. ಸುಹಾಸ್ ಯತಿರಾಜ್ ಅವರು ಕರ್ನಾಟಕ ಮೂಲಕ ಯು.ಪಿ.ಕೇಡರ್ ಐಎಎಸ್ ಅಧಿಕಾರಿ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿರುವ ಕರ್ನಾಟಕ ಮೂಲಕ ಯು.ಪಿ.ಕೇಡರ್ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. ತಮ್ಮ ಅಸಾಧಾರಣ ಪ್ರತಿಭೆ ಮತ್ತು ಅಮೋಘ ಸಾಧನೆ ನಾಡಿನ ಪ್ರತಿಯೊಬ್ಬರಿಗೂ ಹೆಮ್ಮೆಯುಂಟುಮಾಡಿದೆ ಎಂದು ಶ್ಲಾಘಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೂ ಸುಹಾಸ್‌ ಅವರಿಗೆ ಟ್ವೀಟ್‌ ಮಾಡುವ ಮೂಲಕ ಅಭಿನಂದಿಸಿದ್ದಾರೆ. ಇದು ಹೆಮ್ಮೆಯ ಕ್ಷಣ!! ಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್-4 ವಿಭಾಗದಲ್ಲಿ ಚಿನ್ನವನ್ನು ಗೆದ್ದ ಸುಹಾಸ್ ಯತಿರಾಜ್ ಅವರಿಗೆ ಅಭಿನಂದನೆಗಳು. ರಾಷ್ಟ್ರವು ನಿಮ್ಮ ಯಶಸ್ಸನ್ನು ಆಚರಿಸುತ್ತದೆ. ನಿಮ್ಮ ಮುಂದಿನ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು ಎಂದಿದ್ದಾರೆ.

https://x.com/CMofKarnataka/status/1718192867569709159?s=20

lokesh

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

6 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

6 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

6 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

6 hours ago