ಕ್ರೀಡೆ

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ಆ್ಯರನ್‌ ಫಿಂಚ್‌

ಮೆಲ್ಬರ್ನ್‌ : ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್‌ ಮತ್ತು ನಾಯಕ ಎನಿಸಿರುವ ಆ್ಯರನ್‌ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ.

ಆಸ್ಟ್ರೇಲಿಯಾದ ಬಿಗ್‌ಬ್ಯಾಷ್ ಲೀಗ್‌ ಮತ್ತು ಇತರ ದೇಶಗಳಲ್ಲಿ ನಡೆಯುವ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ ಆಟ ಮುಂದುವರಿಸಲು ನಿರ್ಧರಿಸಿದ್ದಾರೆ.

‘ಟಿ20ಯಲ್ಲಿ ನಮಗೆ ವಿಶ್ವಕಪ್‌ ಗೆದ್ದುಕೊಟ್ಟ ಮತ್ತು ಸುದೀರ್ಘ ಅವಧಿಯವರೆಗೆ ತಂಡವನ್ನು ಮುನ್ನಡೆಸಿದ್ದ ನಾಯಕ ತಮ್ಮ ವೃತ್ತಿಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಆ್ಯರನ್‌ ಫಿಂಚ್‌ ಅವರಿಗೆ ಧನ್ಯವಾದಗಳು’ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

ಫಿಂಚ್‌ ಅವರ ನಿವೃತ್ತಿ ನಿರ್ಧಾರ ನಿರೀಕ್ಷಿತವೇ ಆಗಿತ್ತು. ಐದು ಟೆಸ್ಟ್‌ಗಳಲ್ಲಿ ಆಡಿದ್ದ ಅವರಿಗೆ 2018ರ ಬಳಿಕ ಟೆಸ್ಟ್‌ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಫಾರ್ಮ್‌ ಕಳೆದುಕೊಂಡ ಕಾರಣ ಕಳೆದ ವರ್ಷ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು.

ದುಬೈನಲ್ಲಿ 2021 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ತಂಡವನ್ನು ಟ್ರೋಫಿಯತ್ತ ಮುನ್ನಡೆಸಿದ್ದರು. ಆಸ್ಟ್ರೇಲಿಯಾ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಗೆದ್ದಿತ್ತು.

ಆದರೆ ಕಳೆದ ವರ್ಷ ತವರು ನೆಲದಲ್ಲಿ ನಡೆದಿದ್ದ ಚುಟುಕು ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಫಿಂಚ್‌ ನಾಯಕತ್ವದ ತಂಡ ಸೆಮಿಫೈನಲ್‌ ಪ್ರವೇಶಿಸಲು ವಿಫಲವಾಗಿತ್ತು.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

5 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

7 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

8 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

8 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

8 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

8 hours ago