ಪುಣೆ: ಶುಕ್ರವಾರ ಇಲ್ಲಿ ನಡೆಯಲಿರುವ ಭಾರತ ಮತ್ತ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವುದೇ ಎಂದು ಕಾದು ನೋಡಬೇಕಿದೆ.
ಈಗಾಗಲೇ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿರುವ ಭಾರತ ತಂಡ ಈ ಪಂದ್ಯ ಗೆದ್ದು ಸರಣಿ ಗೆಲುವು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.
ಇತ್ತ ವೇಗದ ಬೌಲರ್‌ಗಳ ಸಹಾಯದಿಂದ 3ನೇ ಟಿ20 ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡ ನಾಲ್ಕನೇ ಟಿ20 ಪಂದ್ಯ ಗೆದ್ದು ಸಮಬಲ ಸಾಧಿಸುವ ವಿಶ್ವಾಸದಲ್ಲಿದೆ.
ಭಾರತಕ್ಕೆ ಬ್ಯಾಟರ್‌ಗಳ ಫಾರ್ಮ್ ಕೊರತೆ:
ಇಂಗ್ಲೆಂಡ್ ಬೌಲರ್‌ಗಳ ಎದುರು ಭಾರತದ ವಿಕೆಟ್ ಕೀಪರ್ ಸಂಜು ಸಾಮ್ಸನ್ ದೊಡ್ಡ ಇನ್ನಿಂಗ್ಸ್ ಆಡಲು ವಿಫಲವಾಗುತ್ತಿದ್ದಾರೆ. ಜೊತೆಗೆ ನಾಯಕ ಸೂರ್ಯಕುಮಾರ್ ಯಾದವ್, ಅಬಿಷೇಕ್ ಶರ್ಮಾ, ಆಲ್‌ರೌಂಡರ್ ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಲು ವಿಫಲವಾಗಿರುವುದು ತಂಡದ ಕೋಚ್ ಗೌತಮ್ ಗಂಭೀರ್ ಹಾಗೂ ವ್ಯವಸ್ಥಾಪಕರಿಗೆ ತಲೆನೋವಾಗಿದೆ.
ಪಂದ್ಯ ಆರಂಭ: ರಾತ್ರಿ 7 ಗಂಟೆಗೆ