ಕ್ರೀಡೆ

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ ಜಯ ಸಾಧಿಸಿದೆ. ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡವನ್ನು 23 ರನ್‌ಗಳಿಂದ ಸೋಲಿಸುವ ಮೂಲಕ ಜಿಂಬಾಬ್ವೆಯು ಟೂರ್ನಿಯ ಮೊದಲ ದೊಡ್ಡ ಗೆಲುವು ಸೃಷ್ಟಿಸಿದೆ.

ಶ್ರೀಲಂಕಾದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಜಿಂಬಾಬ್ವೆಯ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದರು. 20 ಓವರ್‌ಗಳಲ್ಲಿ 2 ವಿಕೆಟ್‌ಗೆ 169 ರನ್‌ಗಳ ಗಟ್ಟಿ ಮೊತ್ತ ಕಲೆಹಾಕಿದರು. ಬ್ರಯಾನ್ ಬೆನೆಟ್ ಅವರು 64 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿ ತಂಡಕ್ಕೆ ಆಧಾರ ಸ್ತಂಭರಾದರು.

ಈ ಬೃಹತ್‌ ಮೊತ್ತ ಚೇಸ್ ಮಾಡಿದ ಆಸ್ಟ್ರೇಲಿಯಾ ಆರಂಭದಲ್ಲೇ ಕುಸಿಯಿತು. ಪವರ್‌ಪ್ಲೇಯಲ್ಲೇ 4 ವಿಕೆಟ್‌ಗಳನ್ನು ಕಳೆದುಕೊಂಡು 29 ರನ್‌ಗಳಿಗೆ ಸೀಮಿತವಾಯಿತು. ಮ್ಯಾಟ್ ರೆನ್‌ಶಾ ಅವರು 65 ರನ್‌ಗಳೊಂದಿಗೆ ಹೋರಾಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. 19.3 ಓವರ್‌ಗಳಲ್ಲಿ ಆಸ್ಟ್ರೇಲಿಯಾ 146 ರನ್‌ಗಳಿಗೆ ಆಲ್‌ಔಟ್ ಆಯಿತು.

ಜಿಂಬಾಬ್ವೆಯ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು. ಬ್ಲೆಸಿಂಗ್ ಮುಝರಬಾನಿ ಅವರು 4 ವಿಕೆಟ್‌ಗಳನ್ನು ಪಡೆದು (4-17) ಮ್ಯಾಚ್‌ನ ಅತ್ಯುತ್ತಮ ಆಟಗಾರ ಪ್ರಶಸ್ತಿ ಗಳಿಸಿದರು. ಬ್ರಾಡ್ ಎವಾನ್ಸ್ 3-23 ರನ್‌ಗಳೊಂದಿಗೆ 3 ವಿಕೆಟ್‌ಗಳನ್ನು ತೆಗೆದುಕೊಂಡರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

12 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

13 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

13 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

13 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

13 hours ago