ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯ 3 ನೇ ಟೆಸ್ಟ್ ಪಂದ್ಯವು ನಾಳೆ (ಡಿ.14) ಬ್ರಿಸ್ಬೇನ್‌ನ ಗಬ್ಬಾ ಕ್ರಿಡಾಂಗಣದಲ್ಲಿ ನಡೆಯಲಿದೆ.
ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಪಂದ್ಯದಲ್ಲಿ ಆಡುವ 11 ಆಟಗಾರರ ಹೆಸರನ್ನು ತಿಳಿಸಿದ್ದಾರೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಗಾಯದಿಂದಾಗಿ ಹೊರಗುಳಿದಿದ್ದ ಜೋಶ್ ಹ್ಯಾಜಲ್‌ವುಡ್ ಈಗ ಸಂಪೂರ್ಣವಾಗಿ ಫಿಟ್ ಆಗಿದ್ದು ಈ ಪಂದ್ಯದಲ್ಲಿ ಕಣಕ್ಕಳಿಯಲಿದ್ದಾರೆ ಎಂದು ನಾಯಕ ಪ್ಯಾಟ್ ಕಮಿನ್ಸ್ ಮಾಹಿತಿ ನೀಡಿದ್ದಾರೆ.
ಜೋಶ್ ಹ್ಯಾಜಲ್‌ವುಡ್ ಗೈರಿನಲ್ಲಿ ಎರಡನೇ ಟೆಸ್ಟ್ ಪಂದ್ಯ ಆಡಿ ಮಿಂಚಿದ ಸ್ಕಾಟ್ ಬೋಲ್ಯಾಂಡ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.
5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡೂ ತಂಡಗಳು ಒಂದೊಂದು ಪಂದ್ಯವನ್ನು ಗೆದ್ದು ಸಮಬಲ ಸಾಧಿಸಿವೆ. ಆದ ಕಾರಣ ಈ ಪಂದ್ಯವು ತುಂಬಾ ಕುತೂಹಲ ಕೆರಳಿಸಿದೆ.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನೇಥನ್ ಮೆಕ್‌ಸ್ವೀನಿ, ಮಾರ್ನಲ್ ಲಾಬುಷೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನೇಥನ್ ಲಯನ್, ಜೋಶ್ ಹ್ಯಾಜಲ್‌ವುಡ್.