ಆಸ್ಟ್ರೇಲಿಯಾ : ಟಿ 20 ವಿಶ್ವಕಪ್ ನಲ್ಲಿ ಇಂದು ನಡೆದ ಸೂಪರ್ 12 ಸುತ್ತಿನ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾದ ವಿರುದ್ಧ ಇಂಗ್ಲೆಂಡ್ ಜಯಸಾಧಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಈ ಮೂಲಕ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ಔಟ್ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ. ಮೊದಲ ಗುಂಪಿನಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಅಧಿಕೃತವಾಗಿ ಸೆಮಿಫೈನಲ್ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ.
ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿಯುವ ಆಸ್ಟ್ರೇಲಿಯಾ ಕನಸು ಭಗ್ನಗೊಂಡಿದೆ. ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 141 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 19.4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 144 ರನ್ ಬಾರಿಸುವ ಮೂಲಕ ಜಯ ಸಾಧಿಸಿತು.
2ನೇ ಗುಂಪಿನಲ್ಲಿ ಸೆಮಿಫೈನಲ್ ಗೆ ಯಾವುದೇ ತಂಡ ಖಚಿತವಾಗಿಲ್ಲ. 2 ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಮಿಫೈನಲ್ ನ ರೇಸ್ ನಲ್ಲಿವೆ. ನಾಳೆ ನಡೆಯುವ ಪಂದ್ಯಗಳಲ್ಲಿ ನಿರ್ಧಾರವಾಗಲಿದೆ.“
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…