ಕ್ರೀಡೆ

ಆಸ್ಪ್ರೇಲಿಯಾ ಔಟ್: ಸೆಮಿ ಫೈನಲ್ ಗೆ ಲಗ್ಗೆಇಟ್ಟ ಇಂಗ್ಲೆಂಡ್.

ಆಸ್ಟ್ರೇಲಿಯಾ :  ಟಿ 20 ವಿಶ್ವಕಪ್ ನಲ್ಲಿ ಇಂದು ನಡೆದ ಸೂಪರ್ 12 ಸುತ್ತಿನ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾದ ವಿರುದ್ಧ ಇಂಗ್ಲೆಂಡ್ ಜಯಸಾಧಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಈ ಮೂಲಕ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ಔಟ್ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ. ಮೊದಲ ಗುಂಪಿನಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಅಧಿಕೃತವಾಗಿ ಸೆಮಿಫೈನಲ್​ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ.

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿಯುವ ಆಸ್ಟ್ರೇಲಿಯಾ ಕನಸು ಭಗ್ನಗೊಂಡಿದೆ. ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 141 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 19.4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 144 ರನ್ ಬಾರಿಸುವ ಮೂಲಕ ಜಯ ಸಾಧಿಸಿತು.

2ನೇ ಗುಂಪಿನಲ್ಲಿ ಸೆಮಿಫೈನಲ್ ಗೆ ಯಾವುದೇ ತಂಡ ಖಚಿತವಾಗಿಲ್ಲ. 2 ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಮಿಫೈನಲ್ ನ ರೇಸ್ ನಲ್ಲಿವೆ. ನಾಳೆ ನಡೆಯುವ ಪಂದ್ಯಗಳಲ್ಲಿ ನಿರ್ಧಾರವಾಗಲಿದೆ.“

andolana

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

14 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

16 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

22 mins ago