Mysore
20
overcast clouds
Light
Dark

Australian Open 2024: ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಕನ್ನಡಿಗ ಬೋಪಣ್ಣ!

ಕ್ಯಾನ್‌ಬೆರ್ರಾ: ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ವಿಶ್ವ ಟೆನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಆ ಮೂಲಕ ಬೋಪಣ್ಣ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶನಿವಾರ ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರಿಯಾ ವವಸ್ಸೋರಿ ಜೋಡಿಯನ್ನು ಮಣಿಸಿದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಜೋಡಿಯು ಆಸ್ಟ್ರೇಲಿಯನ್ ಓಪನ್ ಡಬಲ್ಸ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

1 ಗಂಟೆ 39 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಇಟಲಿ ಜೋಡಿಯು ವಿರುದ್ಧ ಭಾರತ ಮತ್ತು ಆಸ್ಟ್ರೇಲಿಯಾ ಜೋಡಿಯು 7-6 (0), 7-5 ಅಂತರದಲ್ಲಿ ಜಯ ದಾಖಲಿಸಿತು.

ಫೈನಲ್‌ ತಲುಪಲು ಬೋಪಣ್ಣ ಮತ್ತು ಅವರ ಆಸ್ಟ್ರೇಲಿಯನ್ ಜೊತೆಗಾರ ಎಬ್ಡೆನ್, ಚೀನಾದ ಜಾಂಗ್ ಝಿಜೆನ್ ಮತ್ತು ಜೆಕ್ ಗಣರಾಜ್ಯದ ತೋಮಸ್ ಮಚಾಕ್ ಜೋಡಿಯನ್ನು ಕೇವಲ ಎರಡು ಗಂಟೆಗಳಲ್ಲಿ 6-3, 3-6, 7-6 ಅಂತರದಲ್ಲಿ ಮಣಿಸಿದ್ದರು.

43 ವಯಸ್ಸಿನ ಬೋಪಣ್ಣ ಪುರುಷರ ಟೆನಿಸ್‌ನಲ್ಲಿ ಹಿರಿಯ ಗ್ರ್ಯಾಂಡ್‌ಸ್ಲಾಮ್ ಚಾಂಪಿಯನ್ ಆದರು. ಅವರು ಜೀನ್-ಜೂಲಿಯನ್ ರೋಜರ್ ಅವರ ದಾಖಲೆ ಮುರಿದಿದ್ದಾರೆ. ರೋಜರ್‌ ತಮ್ಮ 40 ನೇ ವಯಸ್ಸಿನಲ್ಲಿ 2022 ರಲ್ಲಿ ಮಾರ್ಸೆಲೊ ಅರೆವೊಲಾ ಅವರೊಂದಿಗೆ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಟ್ರೋಫಿ ಗೆದ್ದಿದ್ದರು.

https://x.com/AustralianOpen/status/1751226766331683233?s=20

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ