ಕ್ರೀಡೆ

Australian Open Badminton 2025 : ಲಕ್ಷ್ಯ ಸೇನ್‌ಗೆ ಚಿನ್ನದ ಪದಕ

ಸಿಡ್ನಿ : ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಆಸ್ಟ್ರೇಲಿಯನ್ ಓಪನ್ 2025 ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ನ. 23 ರಂದು ಸಿಡ್ನಿಯ ಸ್ಟೇಟ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಸೂಪರ್ 500 ಟೂರ್ನಮೆಂಟ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವದ 14ನೇ ಶ್ರೇಯಾಂಕಿತ ಆಟಗಾರ ಜಪಾನ್‌ನ ಯುಶಿ ತನಕಾ ಅವರನ್ನು 21-15, 21-11 ನೇರ ಸೆಟ್‌ಗಳಿಂದ ಸೋಲಿಸಿ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದನ್ನು ಓದಿ: ತಂದೆಗೆ ಹೃದಯಾಘಾತ : ಇಂದು ನಡೆಯೇಕಿದ್ದ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ

ಸೆಮಿಫೈನಲ್ ಪಂದ್ಯದಲ್ಲಿಎರಡನೇ ಶ್ರೇಯಾಂಕದ ತೈವಾನ್ನ ಚೌ ಟಿಯೆನ್ ಚೆನ್ ವಿರುದ್ಧ ಗೆಲ್ಲಲು ಲಕ್ಷ್ಯ ಸೇನ್ ಬರೋಬ್ಬರಿ 86 ನಿಮಿಷಗಳನ್ನು ತೆಗೆದುಕೊಂಡಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಉತ್ತಮ ಲಯ ಪ್ರದರ್ಶಿಸಿದ ಲಕ್ಷ್ಯ , ಯುಶಿ ತನಕಾ ಅವರನ್ನು ಕೇವಲ 38 ನಿಮಿಷಗಳಲ್ಲಿ ಮಣಿಸಿದರು.

ಈ ಗೆಲುವಿನೊಂದಿಗೆ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದ ಎರಡನೇ ಭಾರತೀಯ ಪುರುಷ ಆಟಗಾರ ಎಂಬ ಹೆಗ್ಗಳಿಕೆಯನ್ನು ಲಕ್ಷ್ಯ ಸೇನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ 2017 ರಲ್ಲಿ ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದಿದ್ದರು. ಇದೀಗ 24ನೇ ವಯಸ್ಸಿನಲ್ಲೇ ಆಸ್ಟ್ರೇಲಿಯನ್ ಓಪನ್‌ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡುವ ಮೂಲಕ ಲಕ್ಷ್ಯ ಸೇನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

4 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

5 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

5 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

6 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

6 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

7 hours ago