ಕ್ರೀಡೆ

Paris Olympics 2024: ಸ್ಟೀಪಲ್‌ ಚೇಸ್‌ನಲ್ಲಿ ಭಾರತಕ್ಕೆ 11ನೇ ಸ್ಥಾನ

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ ಒಲಂಪಿಕ್ಸ್‌ 2024ರ 3000 ಮೀ ಪುರುಷರ ಸ್ಟೀಪಲ್ಸ್‌ ಚೇಸ್‌ ಫೈನಲ್ಸ್‌ನಲ್ಲಿ ಭಾರತದ ಅವಿನಾಶ್‌ ಸಾಬಳೆ ಅವರು ಪದಕ ಪಡೆಯುವಲ್ಲಿ ವಿಫಲರಾಗಿದ್ದಾರೆ.

8 ನಿಮಿಷ 14.18 ಸೆಕೆಂಡುಗಳಲ್ಲಿ ಸ್ಪರ್ಧೆ ಪೂರ್ಣಗೊಳಿಸಿ 29 ವರ್ಷದ ಸಾಬಳೆ ಫೈನಲ್‌ ರೇಸ್‌ನಲ್ಲಿ 11ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಇನ್ನು ಮೊರಾಕ್ಕೋದ ಸೋಫಿಯನ್‌ ಅಲ್‌ ಬಕಾಲಿ 8 ನಿಮಿಷ, 06.05 ಸೆಕೆಂಡುಗಳಲ್ಲಿ ಗುರಿಮುಟ್ಟುವ ಮೂಲಕ ಚಿನ್ನಕ್ಕೆ ಕೊರಳೊಡ್ಡಿದರು. ಅಮೇರಿಕಾದ ಕೆನ್ನೆತ್‌ ರೂಕ್ಸ್‌ 8 ನಿಮಿಷ, 6.41 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದರೇ, 8 ನಿಮಿಷ 06.47 ಸೆಕೆಂಡುಗಳಲ್ಲಿ ಮೂರನೇಯವರಾಗಿ ಕಂಚಿನ ಪದಕ ಗೆದ್ದರು.

ಸ್ಟೀಪಲ್‌ ಚೇಸ್‌ನಲ್ಲಿ ಫೈನಲ್ಸ್‌ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವಿನಾಶ್‌ ಸಾಬಳೆ ಭಾರತಕ್ಕೆ ಪದಕ ತಂದುಕೊಡಲಿದ್ದಾರೆ ಎಂದು ನಂಬಲಾಗಿತ್ತು. ಆದರೆ ಫೈನಲ್ಸ್‌ ರೇಸ್‌ನಲ್ಲಿ ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡ ಸಾಬಳೆ ಬಳಿಕ ಹಿಂದುಳಿದರು. ಅದಾದ ಬಳಿಕ ಅವರು ಮುಂದೆ ಬರಲಿಲ್ಲ. ಅಂತಿಮವಾಗಿ ಸಾಬಳೆ 11ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಲಾಂಗ್‌ ಜಂಪ್‌: ಇತ್ತ ಲಾಂಗ್‌ ಜಂಪ್‌ನಲ್ಲಿ ಭಾರತ ಪರವಾಗಿ ಸ್ಪರ್ಧಿಸಿದ್ದ ಅಬ್ದುಲ್ಲಾ ಅಬೂಬಕ್ಕರ್‌, ಪ್ರವೀಣ್‌ ಚಿತ್ರವೇಲ್‌ ಅವರು ಫೈನಲ್ಸ್‌ ತಲುಪುವಲ್ಲಿ ವಿಫಲರಾಗಿದ್ದಾರೆ. ಒಟ್ಟು 32 ಜನ ಸ್ಪರ್ಧಿಗಳು ಸ್ಪರ್ಧಿಸಿದ್ದ ಈ ವಿಭಾಗದಲ್ಲಿ 16.49 ಮೀ ದೂರ ಜಿಗಿದ ಅಬ್ದುಲ್ಲಾ 21ನೇ ಸ್ಥಾನಕ್ಕೆ ತೃಪ್ತಿಪಟ್ಟರೇ, 16.25 ಮೀ ಜಿಗಿದ ಪ್ರವೀಣ್‌ 27ನೇ ಸ್ಥಾನ ಪಡೆದು ಟೂರ್ನಿಯಿಂದ ಹೊರನಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

1 hour ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

1 hour ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

1 hour ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

1 hour ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

1 hour ago