ಕ್ರೀಡೆ

ವಿರಾಟ್‌ ಕೊಹ್ಲಿ ಹಿಂದಿಕ್ಕಿದ ಬಾಬರ್‌

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್‌ ಬಾಬರ್‌ ಅಜಂ, ಏಕದಿನ ಮಾದರಿಯಲ್ಲಿ ವೇಗವಾಗಿ 6 ಸಾವಿರ ರನ್‌ ಪೂರೈಸುವ ಮೂಲಕ ವಿರಾಟ್‌ ಕೊಹ್ಲಿ ಅವರ ದಾಖಲೆ ಸರಿಗಟ್ಟಿದ್ದಾರೆ.

ಕರಾಚಿ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ ಪಂದ್ಯದಲ್ಲಿ, ನ್ಯೂಜಿಲೆಂಡ್‌ ತಂಡದ ಎದುರು 29 ರನ್‌ ಗಳಿಸಿ ಔಟಾಗುವ ಮೂಲಕ ಕಡಿಮೆ ಇನ್ನಿಂಗ್ಸ್‌ನಲ್ಲಿ 6,000 ರನ್‌ ಗಡಿ ದಾಟಿದ ಸಾಧನೆ ಮಾಡಿದ್ದಾರೆ.

ವೇಗವಾಗಿ 6,000 ರನ್‌ ಕಲೆಹಾಕಿದ ಬ್ಯಾಟರ್‌ಗಳ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಆಮ್ಲಾ ಇದ್ದರೆ, ಎರಡನೇ ಸ್ಥಾನದಲ್ಲಿ ಬಾಬರ್‌ ಅಜಂ, ನಂತರದ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಇದ್ದಾರೆ.

ಏಕದಿನ ಮಾದರಿಯಲ್ಲಿ ಈವರೆಗೆ ಒಟ್ಟು 123 ಇನ್ನಿಂಗ್ಸ್‌ನಲ್ಲಿ ಬ್ಯಾಟ್‌ ಬೀಸಿರುವ ಬಾಬರ್‌, 55.73ರ ಸರಾಸರಿಯಲ್ಲಿ 6,019 ರನ್‌ ಕಲೆಹಾಕಿದ್ದಾರೆ. ಇದರಲ್ಲಿ 19 ಶತಕ ಮತ್ತು 34 ಅರ್ಧಶತಕ ಸೇರಿವೆ.

ವೇಗವಾಗಿ 6 ಸಾವಿರ ರನ್‌ ಕಲೆಹಾಕಿದವರು:

* ಹಾಶೀಂ ಆಮ್ಲಾ (ದಕ್ಷಿಣ ಆಫ್ರಿಕಾ): 123 ಇನ್ನಿಂಗ್ಸ್‌

* ಬಾಬರ್‌ ಅಜಂ (ಪಾಕಿಸ್ತಾನ): 123 ಇನ್ನಿಂಗ್ಸ್‌

* ವಿರಾಟ್‌ ಕೊಹ್ಲಿ (ಭಾರತ): 136 ಇನ್ನಿಂಗ್ಸ್‌

* ಕೇನ್‌ ವಿಲಿಯಮ್ಸನ್‌ (ನ್ಯೂಜಿಲೆಂಡ್‌): 139 ಇನ್ನಿಂಗ್ಸ್‌

* ಡೆವಿಡ್‌ ವಾರ್ನರ್‌ (ಆಸ್ರೇಲಿಯಾ): 139 ಇನ್ನಿಂಗ್ಸ್‌

* ಶಿಖರ್‌ ಧವನ್‌ (ಭಾರತ): 140 ಇನ್ನಿಂಗ್ಸ್‌

* ವಿವಿಯನ್‌ ರಿಚರ್ಡ್ಸನ್‌ (ವೆಸ್ಟ್‌ ಇಂಡೀಸ್):‌ 141 ಇನ್ನಿಂಗ್ಸ್‌

* ಜೋ ರೂಟ್‌ (ಇಂಗ್ಲೆಂಡ್‌): 141 ಇನ್ನಿಂಗ್ಸ್‌

* ಕ್ವಿಂಟನ್‌ ಡಿ ಕಾಕ್‌ (ದಕ್ಷಿಣ ಆಫ್ರಿಕಾ): 142 ಇನ್ನಿಂಗ್ಸ್‌

* ಸೌರವ್‌ ಗಂಗೂಲಿ (ಭಾರತ): 147 ಇನ್ನಿಂಗ್ಸ್‌

* ಎಬಿ ಡಿ ವಿಲಿಯರ್ಸ್‌ (ದಕ್ಷಿಣ ಆಫ್ರಿಕಾ): 147 ಇನ್ನಿಂಗ್ಸ್‌

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago