ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಚುನಾವಣೆಯಲ್ಲಿ ಲೈಂಗಿಕ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಗದ್ದು, ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲ್ಲಿಕ್ ಪರವಾಗಿ ಒಲಂಪಿಕ್ ಪದಕ ವಿಜೇತ ಭಜರಂಗ ಪೂಜಿಯಾ ಬೆಂಬಲ ಸೂಚಿಸಿದ್ದು, ತಮಗೆ ಸಂದಿರುಚ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
ಕುಸ್ತಿಪಟು ಬಜರಂಗ್ ಪುನಿಯಾ ಅವರು ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ನಿವಾಸದ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ನಾನು ಮೊದಲೇ ಹೇಳಿದಂತೆ, ನಮ್ಮ ಸಹೋದರಿಯರಿಗಾಗಿ ಹೋರಾಟ ಮಾಡುತ್ತಿದ್ದೇವು. ನನ್ನಿಂದ ಅವರಿಗೆ ನ್ಯಾಯ ಕೊಡಿಸಲು ಆಗಲಿಲ್ಲ. ಹಾಗಾಗಿ ನಾನು ಪದ್ಮಶ್ರೀ ಪ್ರಶಸ್ತಿಗೆ ಅನರ್ಹ ಎಂದು ಭಾವಿಸಿದ್ದೇನೆ. ಇದನ್ನು ನಾನು ಮನೆಗೆ ತೆಗೆದುಕೊಂಡು ಹೋಗುವುದಿಲ್ಲ ಎಂದರು.
ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ನನಗೆ ಅಪಾಯಿಂಟ್‌ಮೆಂಟ್ ಇಲ್ಲದ ಕಾರಣ ಸಾಧ್ಯವಾಗಲಿಲ್ಲ. ಪ್ರಧಾನಿಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ. ಹಾಗಾಗಿ ಪ್ರಧಾನಿಗೆ ಬರೆದ ಪತ್ರದೊಂದಿಗೆ ನನ್ನ ಪ್ರಶಸ್ತಿಯನ್ನು ಬಿಟ್ಟು ಹೋಗುತ್ತಿದ್ದೇನೆ ಎಂದು ಪುನಿಯಾ ತಿಳಿಸಿದರು.
ಪ್ರಧಾನಿ ಭೇಟಿಯಾಗಲು ಹೋದ ಪುನಿಯಾರನ್ನು ಭೇಟಿಯಾಗಲು ಅನುಮತಿ ಇದೆಯೇ? ಎಂದು ಪ್ರಶ್ನಿಸಿ ಪೊಲೀಸರು ತಡೆದಿದ್ದರು. ಇದಕ್ಕೆ ಉತ್ತರಿಸಿದ ಪುನಿಯಾ “ಇಲ್ಲ, ಅನುಮತಿ ಸಿಕ್ಕಿಲ್ಲ. ನಾನಿಲ್ಲಿ ಪ್ರತಿಭಟನೆ ನೆಡೆಸಲು ಬಂದಿಲ್ಲ ಸಾಧ್ಯವಾದರೆ ದಯವಿಟ್ಟು ಈ ಪತ್ರವನ್ನು ಪ್ರಧಾನಿ ಕಚೇರಿಗೆ ತಲುಪಿಸಿ. ಒಳಗೆ ಹೋಗಲು ನನಗೆ ಸಾಧ್ಯವಾಗದು ಎಂದು ಹೇಳಿದ್ದರು.
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…