ಕ್ರೀಡೆ

ಬಾಂಗ್ಲಾ ವಿರುದ್ಧದ ಭಾರತದ ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಬಹುದೇ ?

ಅಡಿಲೇಡ್: ಟಿ20 ವಿಶ್ವಕಪ್ನ ಪಂದ್ಯದಲ್ಲಿ ಬುಧವಾರ ಭಾರತ ತಂಡ ಬಾಂಗ್ಲಾವನ್ನು ಎದುರಿಸಲಿದ್ದು ಸೆಮಿ ಫೈನಲ್‌ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯ ಪ್ರಮುಖವಾಗಿದೆ. ಭಾರತ ಸ್ವಲ್ಪ ಮೈಮರೆತರೂ ಸೆಮಿಫೈನಲ್ ಹಾದಿ ಕಠಿಣಗೊಳ್ಳಲಿದೆ.
ಬುಧವಾರ ಸಂಜೆ ಅಡಿಲೇಡ್ನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ಒಂದು ಅಂಕ ಪಡೆದು 2ನೇ ಸ್ಥಾನದಲ್ಲೇ ಉಳಿಯಲಿದೆ. ಆಗ ಜಿಂಬಾಬ್ವೆ ವಿರುದ್ಧದ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.
ಬಾಂಗ್ಲಾದೇಶ ವಿರುದ್ಧ ಮೇಲ್ನೋಟಕ್ಕೆ ಭಾರತವೇ ಗೆಲ್ಲುವ ನೆಚ್ಚಿನ ತಂಡ ಎನಿಸಿದರೂ, ಬಾಂಗ್ಲಾದೇಶವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಭಾರತ ತಾನೆದುರಿಸುತ್ತಿರುವ ಕೆಲ ಪ್ರಮುಖ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಕೆ.ಎಲ್.ರಾಹುಲ್ ಲಯಕ್ಕೆ ಮರಳಲು ತಿಣುಕಾಡುತ್ತಿದ್ದಾರೆ. ರೋಹಿತ್ ಶರ್ಮಾ ಸ್ಥಿರತೆ ಕಂಡುಕೊಂಡಿಲ್ಲ. ಪವರ್-ಪ್ಲೇನಲ್ಲಿ ಭಾರತದ ಆಟ ಪಂದ್ಯದಿಂದ ಪಂದ್ಯಕ್ಕೆ ಸಪ್ಪೆಯಾಗುತ್ತಿದೆ.
ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಇದನ್ನು ತಪ್ಪಿಸಬೇಕಿದ್ದರೆ ಆರಂಭಿಕರು ತಮ್ಮ ಸಾಮರ್ಥ್ಯಕ್ಕೆ ತಕ್ಕ ಆಟವಾಡಬೇಕು. ಹಾರ್ದಿಕ್ ಪಾಂಡ್ಯ ಆಲ್ರೌಂಡರ್ ಆಗಿ ಇನ್ನೂ ಮಿಂಚಿಲ್ಲ. ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಆಯ್ಕೆ ಸಮರ್ಥಿಸಿಕೊಳ್ಳುವಂತಹ ಆಟವಾಡಿಲ್ಲ. ಜೊತೆಗೆ ಗಾಯಗೊಂಡಿರುವ ಕಾರಣ ಅವರನ್ನು ಹೊರಗಿಟ್ಟು ರಿಷಭ್ ಪಂತ್ರನ್ನು ಆಡಿಸುವ ಸಾಧ್ಯತೆ ಇದೆ. ಒಂದು ವೇಳೆ ಕಾರ್ತಿಕ್ರನ್ನು ಉಳಿಸಿಕೊಂಡರೂ ದೀಪಕ್ ಹೂಡಾ ಬದಲಿಗೆ ಪಂತ್ರನ್ನು ಆಡಿಸಬಹುದು. ಇನು ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಕಣಕ್ಕಿಳಿಯುವ ನಿರೀಕ್ಷೆ ಇದೆ. ಉಳಿದಂತೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗುವ ಸಾಧ್ಯತೆ ಕಡಿಮೆ. ಬಾಂಗ್ಲಾದೇಶ ಪ್ರತಿಭಾನ್ವಿತ ಆಟಗಾರರನ್ನು ಹೊಂದಿದ್ದು, ಬೌಲರ್ಗಳ ಮೇಲೆ ಹೆಚ್ಚು ಅವಲಂಬಿತಗೊಂಡಿದೆ.
ಸಂಭವನೀಯ ಆಟಗಾರರ ಪಟ್ಟಿ
ಭಾರತ: ಕೆ ಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಅಶ್ರ್ದೀಪ್ ಸಿಂಗ್.
ಬಾಂಗ್ಲಾ: ಸೌಮ್ಯ ಸರ್ಕಾರ್, ನಜ್ಮುಲ್ ಹುಸೈನ್ ಶಾಂಟೋ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್(ನಾಯಕ), ಅಫೀಫ್ ಹೊಸೈನ್, ನುರುಲ್ ಹಸನ್, ಮೊಸಾದೆಕ್, ಯಾಸಿರ್, ಟಸ್ಕಿನ್ ಅಹಮ್ಮದ್, ಮುಸ್ತಾಫಿಜುರ್, ಹಸನ್.
ಪಂದ್ಯ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್

andolanait

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

3 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

3 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

3 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

12 hours ago