ಕ್ರೀಡೆ

ಬಾಂಗ್ಲಾ ಟೆಸ್ಟ್: ಗೆಲುವಿನೆಡೆಗೆ ಭಾರತ ಮುನ್ನಡೆ

ಜಾಕೀರ್ ಹಸನ್‌ ಶತಕ ಸಂಭ್ರಮ, ಮತ್ತೆ ಮಿಂಚಿದ ಸ್ಪಿನ್ನರ್ ಗಳು

ಚಿತ್ತಗಾಂಗ್‌ : ಬಂದರು ನಗರಿ ಚಿತ್ತಗಾಂಗ್‌ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾ ನಡುವಿನ ಮೊದಲ ಟೆಸ್ಟ್​ ಪಂದ್ಯದ ನಾಲ್ಕನೇ ದಿನ ಭಾರತ ಗೆಲುವಿನತ್ತ ಮುಖ ಮಾಡಿದೆ. ದಿನದಾಟದಂತ್ಯಕ್ಕೆ ಬಾಂಗ್ಲಾ ತಂಡ ಪ್ರಮುಖ 6 ವಿಕೆಟ್ ಕಳೆದುಕೊಂಡು 272 ರನ್ ಗಳಿಸಿದೆ.

ನಾಲ್ಕನೇ ದಿನದಾಟದಲ್ಲಿ ಬಾಂಗ್ಲಾ ಪರ ಜಾಕೀರ್ ಹಸನ್ ಶತಕ ಸಿಡಿಸಿ ಸಂಭ್ರಮಿಸಿದರೆ, ನಾಯಕ ಶಕೀಬ್ ಹಾಗೂ ಮೆಹದಿ ಹಸನ್ ಐದನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಈ ಪಂದ್ಯದಲ್ಲಿ ಬಾಂಗ್ಲಾ ಗೆಲ್ಲಬೇಕಾದರೆ ಕೊನೆಯ ದಿನದಲ್ಲಿ 241 ರನ್ ಗಳಿಸಬೇಕಿದೆ. ಟೀಂ ಇಂಡಿಯಾ ಗೆಲುವು ಸಾಧಿಸಬೇಕೆಂದರೆ ಬಾಂಗ್ಲಾ ತಂಡದಲ್ಲಿ ಉಳಿದಿರುವ 4 ವಿಕೆಟ್​ಗಳನ್ನು ಉರುಳಿಸಬೇಕಿದೆ.

ಮೊದಲ ಇನಿಂಗ್ಸ್‌ನಲ್ಲಿ 404 ರನ್ ಗಳಿಸಿದ ಭಾರತ, ಎರಡನೇ ಇನ್ನಿಂಗ್ಸ್​ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

ಭಾರತ ನೀಡಿರುವ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾ ಪಡೆ, 3ನೇ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 42 ರನ್​ಗಳಿಸಿತ್ತು. ಬಳಿಕ ನಾಲ್ಕನೇ ದಿನದಾಟ ಆರಂಭಿಸಿದ ಬಾಂಗ್ಲಾದೇಶ ತಂಡದ ಆರಂಭಿಕ ಜೋಡಿ ನಜ್ಮುಲ್ ಹುಸೇನ್ ಶಾಂಟೊ ಮತ್ತು ಜಾಕಿರ್ ಹಸನ್ ಮೊದಲ ವಿಕೆಟ್‌ಗೆ 124 ರನ್ ಸೇರಿಸಿದರು. ಆದರೆ ಈ ಜೋಡಿ ಮುರಿದ ತಕ್ಷಣ ಬಾಂಗ್ಲಾದೇಶದ ಉಳಿದ ಬ್ಯಾಟರ್‌ ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿಕೊಂಡರು.

ಅಕ್ಷರ್ ಪಟೇಲ್, ಕುಲ್ದೀಪ್ ಮ್ಯಾಜಿಕ್ ಮುಂದೆ ಮಂಕಾದ ಬಾಂಗ್ಲಾ ತಂಡ ನಿರಂತರವಾಗಿ ವಿಕೆಟ್ ಕಳೆದುಕೊಳ್ಳಲಾರಂಭಿಸಿತು. ಆದರೆ, ಇದಕ್ಕೂ ಮುನ್ನ ಶಾಂಟೊ ಅವರನ್ನು ಔಟ್ ಮಾಡುವ ಮೂಲಕ ಉಮೇಶ್ ಯಾದವ್ ಭಾರತಕ್ಕೆ ಮೊದಲ ವಿಕೆಟ್ ತಂದುಕೊಡುವಲ್ಲಿ ಯಶಸ್ವಿಯಾದರು. ತಮ್ಮ ಇನ್ನಿಂಗ್ಸ್​ನಲ್ಲಿ 156 ಎಸೆತಗಳನ್ನು ಎದುರಿಸಿದ ಶಾಂಟೊ ಏಳು ಬೌಂಡರಿಗಳ ನೆರವಿನಿಂದ 67 ರನ್ ಗಳಿಸಿದರು.
ಶಾಂಟೋ ವಿಕೆಟ್ ಬಳಿಕ ಅಕ್ಷರ್, ಯಾಸಿರ್ ಅಲಿಯನ್ನು ವಜಾ ಮಾಡಿದರು. ಲಿಟನ್ ದಾಸ್ ಅವರನ್ನು ಕುಲ್ದೀಪ್ ಯಾದವ್ ಔಟ್ ಮಾಡುವ ಮೂಲಕ ಭಾರತಕ್ಕೆ ನಾಲ್ಕನೇ ಯಶಸ್ಸು ತಂದುಕೊಟ್ಟರು. ಯಾಸಿರ್ ಐದು ರನ್ ಗಳಿಸಿದರೆ, ಲಿಟನ್ 19 ರನ್ ಗಳಿಸಿ ಪೆವಿಲಿಯನ್​ ಸೇರಿಕೊಂಡರು.

ಶತಕ ಬಾರಿಸುವುದರೊಂದಿಗೆ ಭಾರತಕ್ಕೆ ತಲೆನೋವಾಗಿದ್ದ ಹಸನ್​ರನ್ನು ಔಟ್​ ಮಾಡುವ ಮೂಲಕ ಅಶ್ವಿನ್ ಭಾರತಕ್ಕೆ ಐದನೇ ಯಶಸ್ಸು ನೀಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 224 ಎಸೆತಗಳನ್ನು ಎದುರಿಸಿದ ಹಸನ್, 13 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 100 ರನ್ ಗಳಿಸಿದರು. ನಂತರ ಬಾಂಗ್ಲಾದೇಶಕ್ಕೆ ಐದನೇ ಹೊಡೆತವನ್ನು ನೀಡಿದ ಅಕ್ಷರ್, ಮುಶ್ಫಿಕ್ಮರ್ ರಹೀಮ್ ಅವರ ಇನ್ನಿಂಗ್ಸ್ ಅನ್ನು 23 ರನ್‌ಗಳಿಗೆ ಕೊನೆಗೊಳಿಸಿದರು. ಬಳಿಕ ನೂರುಲ್ ಹಸನ್​ಗೂ ಪೆವಿಲಿಯನ್ ಹಾದಿ ತೋರಿಸಿದರು.

andolanait

Recent Posts

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

5 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದತಿಗಿಂತ ‘ಶುದ್ಧೀಕರಣ’ ತುರ್ತು ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…

6 hours ago

ಆರೋಗ್ಯಕರ ನಾಳೆಗಾಗಿ ಆಯುರ್ವೇದ – ಒಂದು ಆರೋಗ್ಯ, ಒಂದು ಭವಿಷ್ಯ

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…

6 hours ago

ಡಾ.ಎಸ್.ಜೆ. ನಾಗಲೋಟಿಮಠ ಅವರ ಸ್ಛೂರ್ತಿದಾಯಕ ನಡವಳಿಕೆ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…

6 hours ago

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

6 hours ago