ಕ್ರೀಡೆ

ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಾಂಗ್ಲಾ: 546 ರನ್​ಗಳ ಭರ್ಜರಿ ಗೆಲುವು

ಢಾಕಾ: ಅಫ್ಘಾನಿಸ್ತಾನ ವಿರುದ್ದದ ಏಕೈಕ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶವು ಭರ್ಜರಿಯಾಗಿ ಗೆದ್ದುಕೊಂಡಿದೆ. ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆದ ಪಂದ್ಯವನ್ನು ಲಿಟ್ಟನ್ ದಾಸ್ ಪಡೆ 546 ರನ್ ಅಂತರದಿಂದ ಗೆದ್ದು ಬೀಗಿದೆ.

ಬಾಂಗ್ಲಾದೇಶ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. ಅವರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ದಾಖಲಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಬಾಂಗ್ಲಾದೇಶ ಈ ಗೌರವಕ್ಕೆ ಪಾತ್ರವಾಯಿತು.

ಟೆಸ್ಟ್ ಪಂದ್ಯ ಗೆಲ್ಲಲು 662 ರನ್ ಗುರಿ ಪಡೆದಿದ್ದ ಅಫ್ಘಾನಿಸ್ತಾನವು ಕೇವಲ 115 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು. 2019ರ ಟೆಸ್ಟ್ ಸೋಲಿನ ಸೇಡನ್ನು ಬಾಂಗ್ಲಾ ಭರ್ಜರಿಯಾಗಿ ತೀರಿಸಿಕೊಂಡಿತು.

ಬಾಂಗ್ಲಾ ದೇಶವು ಮೊದಲ ಇನ್ನಿಂಗ್ಸ್ ನಲ್ಲಿ 382 ರನ್ ಗಳಿಸಿದ್ದರೆ, ಅಫ್ಘಾನಿಸ್ತಾನವು ಕೇವಲ 146 ರನ್ ಮಾಡಿತ್ತು. ಎರಡನೇ ಇನ್ನಿಂಗ್ಸ್ ಆಡಿದ್ದ ಬಾಂಗ್ಲಾ ನಾಲ್ಕು ವಿಕೆಟ್ ನಷ್ಟಕ್ಕೆ 425 ರನ್ ಮಾಡಿ ಡಿಕ್ಲೇರ್ ಮಾಡಿಕೊಂಡಿತ್ತು.

ಬಾಂಗ್ಲಾದ ನಜ್ಮುಲ್ ಹುಸೇನ್ ಶಂಟೋ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಮೊದಲ ಇನ್ನಿಂಗ್ಸ್ ನಲ್ಲಿ 146 ರನ್ ಮಾಡಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 124 ರನ್ ಬಾರಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಮೊಮಿನಲ್ ಹಕ್ 121 ರನ್ ಗಳಿಸಿದ್ದರು.

ನಜ್ಮುಲ್ ಹುಸೇನ್ ಶಂಟೋ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಬಾಂಗ್ಲಾ ಪ್ರವಾಸದಲ್ಲಿ ಅಫ್ಘಾನ್ ತಂಡವು ಮೂರು ಏಕದಿನ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಲಿದೆ

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

9 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

10 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

13 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

15 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

20 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

28 mins ago