ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಪ್ರಥಮ ಟೆಸ್ಟ್‌ ಗೆದ್ದು ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ

ಏಕದಿನ ವಿಶ್ವಕಪ್‌ ಬೆನ್ನಲ್ಲೇ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್‌ 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಮೊದಲಿಗೆ ನಡೆದ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದಿದ್ದ ನ್ಯೂಜಿಲೆಂಡ್‌ ಇದೀಗ ಮೊದಲನೇ ಟೆಸ್ಟ್‌ನಲ್ಲಿ ಸೋಲುವ ಮೂಲಕ ಇದೇ ಮೊದಲ ಬಾರಿಗೆ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಸೋತ ಮುಖಭಂಗಕ್ಕೊಳಗಾಗಿದೆ.

ಹೌದು, ಬಾಂಗ್ಲಾದೇಶದ ಸಿಲ್ಹೆಟ್‌ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 150 ರನ್‌ಗಳ ಭರ್ಜರಿ ಜಯ ಸಾಧಿಸಿರುವ ಬಾಂಗ್ಲಾದೇಶ ನೂತನ ಇತಿಹಾಸ ನಿರ್ಮಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 310 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಅತ್ತ ನ್ಯೂಜಿಲೆಂಡ್‌ 317 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಕೇವಲ 7 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತ್ತು.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ 338 ರನ್‌ ಗಳಿಸಿದ ಬಾಂಗ್ಲಾದೇಶ ಆಲ್‌ಔಟ್‌ ಆಗಿ ಎದುರಾಳಿ ನ್ಯೂಜಿಲೆಂಡ್‌ಗೆ 332 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ನ್ಯೂಜಿಲೆಂಡ್‌ ಕೇವಲ 181 ರನ್‌ಗಳಿಗೆ ಆಲ್‌ಔಟ್‌ ಆಗಿ ಹೀನಾಯ ಸೋಲನ್ನು ಕಂಡು ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾ ವಿರುದ್ಧ ಮಂಡಿಯೂರಿತ್ತು.

ಬಾಂಗ್ಲಾದೇಶದ ಪರ ಮೊದಲ ಇನ್ನಿಂಗ್ಸ್‌ನಲ್ಲಿ 4 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಪಡೆದು ಗೆಲುವಿಗೆ ಪ್ರಮುಖ ಕಾರಣಕರ್ತ ಎನಿಸಿಕೊಂಡ ತೈಜುಲ್‌ ಇಸ್ಲಾಂ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

andolana

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

5 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

7 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

7 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

8 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

8 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

8 hours ago