ಚಿತ್ತಗಾಂಗ್(ಬಾಂಗ್ಲಾದೇಶ):ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ನಡುವಣ ಮೊದಲ ಟೆಸ್ಟ್ ಪಂದ್ಯ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಿದ್ದು ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 278 ರನ್ಗಳ ಸಾಧಾರಣ ಮೊತ್ತ ಪೇರಿಸಿದೆ.
ರೋಹಿತ್ ಶರ್ಮ ಗಾಯಾಳಾದ ಕಾರಣ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆದ್ದ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. 48 ರನ್ ಗಳಿಗೆ ಪ್ರಮುಖ ಮೂರು ವಿಕೆಟ್ ಗಳು ಪತನಗೊಂಡಿದ್ದವು. ಆರಂಭಿಕರಾದ ಕೆಎಲ್ ರಾಹುಲ್ 22, ಶುಭ್ಮನ್ ಗಿಲ್ 20 ಹಾಗೂ ವಿರಾಟ್ ಕೊಹ್ಲಿ ಕೇವಲ 1 ರನ್ ಗೆ ಔಟಾಗಿದ್ದರು.
ಈ ವೇಳೆ ಉತ್ತಮ ಜೊತೆಯಾಟ ನೀಡಿದ ಚೇತೇಶ್ವರ ಪೂಜಾರ ಹಾಗೂ ರಿಷಬ್ ಪಂತ್ 60 ರನ್ ಗಳ ಜೊತೆಯಾಟ ನೀಡಿದರು. ಪಂತ್ 46 ರನ್ ಗಳಿಸಿದ್ದಾಗ ಮೆಹದಿ ಹಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಅರ್ಧ ಶತಕ ವಂಚಿತರಾದರು. ಚೇತೇಶ್ವರ ಪೂಜಾರ 90 ರನ್ ಗಳಿಸಿದ್ದಾಗ ತೈಜುಲ್ ಇಸ್ಲಾಮ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು.
ಶ್ರೇಯಸ್ ಅಯ್ಯರ್ ಅಜೇಯ 82 ರನ್ ಪೇರಿಸಿದ್ದು ಎರಡನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ 3, ಮೆಹದಿ ಹಸನ್ 2 ಮತ್ತು ಖಾಲೀದ್ ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
ಟ್ರೋಲ್ಗೆ ಗುರಿಯಾದ ಕೊಹ್ಲಿ
ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ತೈಜು ಲ್ ಇಸ್ಲಾಂ ಅವರ ಟರ್ನಿಂ ಗ್ ಎಸೆತಕ್ಕೆ ಕೊಹ್ಲಿ ಲೆಗ್ ಬಿಫೋರ್ ಕ್ಯಾಚ್ ನೀಡಿ ಔಟಾದರು. ಮಾಜಿ ನಾಯಕ ಡಿಆರ್ ಎಸ್ ಮೊರೆ ಹೋದರಾದರೂ ಅದು ವ್ಯರ್ಥವಾಯಿತು. ಕೊಹ್ಲಿ 2020 ರಿಂದ ಟೆಸ್ಟ್ನಲ್ಲಿ ಶತಕ ಗಳಿಸಿಲ್ಲ. ಕಡಿಮೆ ರನ್ ಗೆ ಔಟಾದ ನಂತರ ಕೊಹ್ಲಿ ಅವರನ್ನು ಮತ್ತೆ ಭಾರಿ ಟ್ರೋಲ್ ಮಾಡಲಾಗುತ್ತಿದೆ. ಎರಡು ವರ್ಷಗಳಲ್ಲಿ 19 ಪಂದ್ಯಗಳನ್ನಾಡಿರುವ ಕೊಹ್ಲಿ ಅವರು 33 ಇನ್ನಿಂಗ್ಸ್ ಗಳಲ್ಲಿ 26.45 ಸರಾಸರಿಯೊಂದಿಗೆ 873 ರನ್ ಗಳನ್ನು ಗಳಿಸಿದ್ದಾರೆ. 79 ಅವರ ಅತ್ಯಧಿಕ ಸ್ಕೋ ರ್ ಆಗಿದೆ. 6 ಅರ್ಧಶತಕಗಳನ್ನು ಗಳಿಸಿದ್ದಾರೆ.
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…